Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಗ್ರಾಮಸಭೆಗಳ ಮಾದರಿಯಲ್ಲಿ ವಾರ್ಡ್ ಸಭೆ ರಚನೆ: ಸಿಎಂ ಡಿ ಕೆ ಶಿವಕುಮಾರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 67 ವೀಕ್ಷಣೆಗಳು
dk shivakumar

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆನಡೆಸಿ ಬುಧವಾರ ಮಾತನಾಡಿದ ಅವರು, 5ನೇ ಹಣಕಾಸು ಆಯೋಗದ ವರದಿಯ ಹಣಕಾಸು ಹಂಚಿಕೆ ಹಾಗೂ ಆಡಳಿತ ಸುಧಾರಣೆಗೆ ಸಂಬಂಧಿಸಿದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಕುರಿತಾಗಿ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು. ಸಮಿತಿಯು ಅನುಷ್ಠಾನಗೊಳಿಸಬಹುದಾದ ಶಿಫಾರಸುಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲಿದೆ ಎಂದರು.

5ನೇ ರಾಜ್ಯ ಹಣಕಾಸು ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳಿಗೆ ಒಟ್ಟು ರೂ. 1261 ಕೋಟಿ, ತಾಲೂಕು ಪಂಚಾಯಿತಿಗಳಿಗೆ ಒಟ್ಟು ರೂ. 557 ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಒಟ್ಟು ರೂ. 183 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಸಂವಿಧಾನದ 74ನೇ ತಿದ್ದುಪಡಿಯ ಆಶಯದಂತೆ ನಗರ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕಾಯ್ದೆಗಳಿಗೆ ಸೂಕ್ತ ತಿದ್ದುಪಡಿ ತರುವ ಕುರಿತಾಗಿ ನ್ಯಾಷನಲ್ ಲಾ ಕಾಲೇಜಿನ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.

ಗ್ರಾಮಸಭೆಗಳ ಮಾದರಿಯಲ್ಲಿ ವಾರ್ಡ್ ಸಭೆ ರಚನೆ

“ಗ್ರಾಮಸಭೆಗಳ ಮಾದರಿಯಲ್ಲಿ ವಾರ್ಡ್ ಸಭೆಗಳ ಮೂಲಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕಾಗಿದೆ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿ ಜಿಲ್ಲಾ ಯೋಜನಾ ಸಮಿತಿಗಳನ್ನು ರಚಿಸಲಾಗಿದ್ದು, ಈ ಎಲ್ಲಾ ಸಮಿತಿಗಳು ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಿ ವರದಿಯನ್ನು ಸಲ್ಲಿಸುವಂತೆ” ಸೂಚನೆ ನೀಡಿದರು.

‘ಜನರ ಯೋಜನೆ’ ಜಾರಿಗೆ ಮಾರ್ಗಸೂಚಿ

“ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಯೋಜನಾ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲು ಅವಶ್ಯಕವಾದ ಅನುದಾನವನ್ನು ಒದಗಿಸಬೇಕು. ತಳಮಟ್ಟದಿಂದ ಜನರ ಬೇಡಿಕೆಗಳನ್ನು ಪಡೆದು ರಾಜ್ಯ ಆಯವ್ಯಯದಲ್ಲಿ ಒಳಗೂಡಿಸುವ ನಿಟ್ಟಿನಲ್ಲಿ ʻಜನರ ಯೋಜನೆʼ ಯನ್ನು ಜಾರಿಗೊಳಿಸುವುದಾಗಿ ಬಜೆಟ್ ನಲ್ಲಿ ನಾವು ಘೋಷಿಸಿದ್ದೇವೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಇದಕ್ಕೆ ಅಗತ್ಯವಾದ ತಂತ್ರಾಂಶವನ್ನು ರೂಪಿಸಿ” ಎಂದು ನಿರ್ದೇಶನ ನೀಡಿದರು.

“ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಅನುಷ್ಠಾನದ ಜವಾಬ್ದಾರಿ ನಕ್ಷೆಯನ್ನು ಸಿದ್ಧಪಡಿಸಲು ಈಗಾಗಲೇ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಇಲಾಖೆಗಳು ನಿಗದಿತ ಅವಧಿಯ ಒಳಗಾಗಿ ಜವಾಬ್ದಾರಿ ನಕ್ಷೆಯನ್ನು ಸಿದ್ಧಪಡಿಸಿ ಸಲ್ಲಿಸಲು” ಸೂಚನೆ ನೀಡಿದರು.

ಸ್ಥಳೀಯ ಸಂಸ್ಥೆಗಳಿಗೆ ಜಿಎಸ್ಟಿಯಲ್ಲಿ ಪಾಲಿನ ಬಗ್ಗೆ ಪ್ರಸ್ತಾವನೆ

“ಕರ್ನಾಟಕ ಪಂಚಾಯತ್ ಆಡಳಿತಾತ್ಮಕ ಸೇವೆಯನ್ನು ಪ್ರಾರಂಭಿಸುವ ಕುರಿತಾಗಿ ಇಲಾಖೆಯ ಸಚಿವರಿಂದ ಪ್ರಸ್ತಾವನೆಯನ್ನು ಪಡೆಯಲಾಗುವುದು. ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಜಿಎಸ್ಟಿಯಲ್ಲಿ ಪಾಲು ನೀಡುವ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಜಿಎಸ್ಟಿ ಮಂಡಳಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು” ಎಂದು ಹೇಳಿದರು.

ಗ್ರಾಮ ಠಾಣಾ ಗಡಿಯನ್ನು ನಿಗದಿಪಡಿಸುವ ಕಾರ್ಯವನ್ನು ತ್ವರಿತಗೊಳಿಸಿ ಪೂರ್ಣಗೊಳಿಸಬೇಕು. ಇದಕ್ಕಾಗಿ ಸ್ವಮಿತ್ವ ದತ್ತಾಂಶವನ್ನು ಬಳಸಿಕೊಳ್ಳಬೇಕು. ಪಂಚಾಯತ್ ರಾಜ್ ಮತ್ತು ಕಂದಾಯ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು

ಕೈಗಾರಿಕೆಗಳಿಗೆ ತೆರಿಗೆ ಹಾಕುವ ಅಧಿಕಾರವನ್ನು ಗ್ರಾಮ ಪಂಚಾಯಿತಿಗಳಿಂದ ಕೆ.ಐ.ಎ.ಡಿ.ಬಿ ಹಿಂಪಡೆದಿರುವುದರಿಂದ ಗ್ರಾಮ ಪಂಚಾಯಿತಿಗಳ ಆದಾಯ ಕಡಿತವಾಗಿರುವುದು ಗಮನಕ್ಕೆ ಬಂದಿದೆ. ಪ್ರಾಧಿಕಾರವು ಸಂಗ್ರಹಿಸಿದ ಸ್ವತ್ತಿನ ತೆರಿಗೆಯ ಶೇ.30 ರಷ್ಟು ಗ್ರಾಮ ಪಂಚಾಯಿತಿಗಳಿಗೆ ನೀಡಲು ಅಧಿನಿಯಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರಾಧಿಕಾರ ಇದುವರೆಗೆ ಸಂಗ್ರಹಿಸಿರುವ ತೆರಿಗೆ ಮೊತ್ತ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿರುವ ಮೊತ್ತದ ಸಂಪೂರ್ಣ ವಿವರಗಳನ್ನು ಒದಗಿಸಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment