Wednesday, December 24, 2025
Google search engine
Homeರಾಜ್ಯಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್. ಎಸ್. ತಂಗಡಗಿ ಹೇಳಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ರೈತರ ಪರವಾಗಿದೆ. ಕುಡಿಯುವ ನೀರಿಗೂ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಲಾಗುವುದು ಎಂದಿದ್ದಾರೆ.

ಮಾ.21ರಂದು ಬೆಂಗಳೂರಿನಲ್ಲಿ ನಡೆದ ಐಸಿಸಿ ಸಲಹಾ ಸಮಿತಿ ಸಭೆಯಲ್ಲಿ, ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಏ.9 ಅಥವಾ 10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್ಸ್ ನಂತೆ ನೀರು ಹರಿಸಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಫಸಲಿಗಾಗಿ ಕಾಯುತ್ತಿರುವ ಬೆಳೆದು ನಿಂತ ಬೆಳೆಗಳಿಗೆ ನೀರು ಒದಗಿಸಲಾಗುವುದು. ಕೊನೆಯ ಭಾಗದ ರೈತರಿಗೆ ನೀರು ತಲುಪುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಸಚಿವ ಶಿವರಾಜ್ ಎಸ್.ತಂಗಡಗಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನಿಷೇಧಾಜ್ಞೆ ಮೂಲಕ ನೀರು ಹರಿಸಲಾಗುವುದು. ರೈತರು ಮತ್ತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ಇದೇ ವೇಳೆ ಭರವಸೆ ನೀಡಿದ್ದಾರೆ.‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments