Wednesday, 18 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್
ರಾಜ್ಯ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡದ ಕಾರಣ ಪತ್ನಿ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
mysore women

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲ ಎಂದು ಬೇಸರಗೊಂಡ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು, ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ.

ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಮನೆಯಲ್ಲಿ ಗಂಡ ಹಾಗೂ ಮಗನ ಜೊತೆ ವಾಸವಿದ್ದರು.

ನಿನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಗಂಡ ಮನೆಯಿಂದ ಹೊರ ಹೋದ ನಂತರ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ.

ಅಕ್ಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿರುವ ಸಹೋದರ ಗುರುಮೂರ್ತಿ, ಗಂಡ ಹಾಗೂ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8426 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment