Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಬಜೆಟ್ ಬಳಿಕ ಹಾಲಿನ ದರ ಹೆಚ್ಚಳ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
nandini milk
nandini milk

ಬೆಂಗಳೂರು: ಬಸ್,ಮೆಟ್ರೋ ಪ್ರಯಾಣ ದರ ಏರಿಕೆಗಳ ಸಂಕಷ್ಟದ ಬೆನ್ನಲ್ಲೇ ಬಜೆಟ್​ ಬಳಿಕ ರಾಜ್ಯ ಸರ್ಕಾರ ಹಾಲಿನ ದರವನ್ನೂ ಕೂಡ ಹೆಚ್ಚಳ ಮಾಡುವ ಸಾಧ್ಯತೆಯಿದೆ.

ಬೆಲೆ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್​​ಗೆ 5 ರೂ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್ಚೆಯಾಗಿತ್ತು. ಈ ವೇಳೆ ಹಾಲಿನ ದರ ಲೀಟರಿಗೆ 5 ರೂ ಏರಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸಂಗೋಪನೆಯ ಖರ್ಚು ವೆಚ್ಚಗಳ ಹೆಚ್ಚಳದಿಂದ ಬೆಲೆ ಏರಿಸಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದವು.

ಹಾಲಿನ ದರ ಏರಿಸುವಂತೆ ರೈತರಿಂದ ಮನವಿ

ಕಳೆದ ವರ್ಷ ಡಿಸೆಂಬರ್​ನಲ್ಲಿ ರೈತರು ಹಾಗೂ ಹಾಲು‌ ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂ ಏರಿಕೆ ಮಾಡುವಂತೆ ಕೆಎಂಎಫ್​ಗೆ ಮನವಿ ಮಾಡಿದ್ದವು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದರು.

ಪ್ರೋತ್ಸಾಹ ಧನ ಹೆಚ್ಚಳ:

ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಬಸವೇಶ್ವರ ಕಲ್ಯಾಣ‌ ಮಂಟಪದಲ್ಲಿ ನಡೆದ ಸಭೆಯಲ್ಲಿ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ಪರಿಷ್ಕೃತ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಎಮ್ಮೆ ಹಾಲಿಗೆ 3.40 ರೂ., ಆಕಳ ಹಾಲಿಗೆ 1 ರೂ. ಅಂತೆ ಪ್ರೋತ್ಸಾಹ ಧನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದರು.

ದರ ಪರಿಷ್ಕರಣೆಯಿಂದ ಪ್ರಸಕ್ತ ಎಮ್ಮೆ ಹಾಲಿನ ದರ ಪ್ರತಿ ಲೀ 41.60 ರೂ. ದರವಿದ್ದು, ಈಗ 3.40 ರೂ. ಹೆಚ್ಚಳ ಮತ್ತು 5 ರೂ. ಪ್ರೋತ್ಸಾಹ ಧನ ಸೇರಿ ಒಟ್ಟು 50 ರೂ. ಸಿಗಲಿದೆ. ಅದರಂತೆ ಆಕಳ ಹಾಲಿಗೆ ಪ್ರತಿ‌ ಲೀ 29.10 ರೂ. ದರವಿದ್ದು, ಈಗ 1 ರೂ. ಹೆಚ್ಚಳ ಮತ್ತು 5 ರೂ. ಪ್ರೋತ್ಸಾಹ ಧನ ಸೇರಿ ಒಟ್ಟು 35 ರೂ. ರೈತರಿಗೆ ಸಿಗಲಿದೆ. ಬೆಳಗಾವಿ ಜಿಲ್ಲೆ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದರು.

5 ಕೋಟಿ ಲಾಭ:

ರೈತರಿಗೆ 10 ದಿನದಲ್ಲೇ ಬಿಲ್ ಪಾವತಿ ಮಾಡಲಾಗುತ್ತಿದೆ. ಇದರಿಂದ ರೈತರಿಗೂ ಮತ್ತು ಗ್ರಾಹಕರಿಗೂ ಅನುಕೂಲವಾಗಲಿದೆ. ಕಳೆದ ವರ್ಷ 68 ಲಕ್ಷ ನಿವ್ವಳ ಲಾಭ ಜಿಲ್ಲಾ ಹಾಲು ಒಕ್ಕೂಟಕ್ಕೆ ಆಗಿತ್ತು. ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗೂ 5ಕೋಟಿ ಲಾಭ ತರಲು ಕೆಲಸ ಮಾಡಲಾಗುತ್ತಿದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment