Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಮಹಿಳಾ ಸ್ನೇಹಿ ಗ್ರಾ.ಪಂ. ಅಭಿಯಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
priayank kharge
priayank kharge

ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 08ರಿಂದ 2025ರ ಜೂನ್ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 3-ಹೆಚ್ ಅನ್ವಯ ಮಹಿಳೆಯರಿಗಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ.
ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಮಹಿಳಾ ಸ್ವಸಹಾಯ ಹಾಗೂ ಸ್ತ್ರೀಶಕ್ತಿ ಸಂಘಗಳ ಸಹಭಾಗಿತ್ವದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸಿ, ಅರ್ಥಪೂರ್ಣವಾಗಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಬೇಕೆಂದು ಸಚಿವರು ಹೇಳಿದ್ದಾರಲ್ಲದೆ, ಮಹಿಳೆಯರಿಂದ ಬರುವ ಬೇಡಿಕೆ, ಸಮಸ್ಯೆ ಹಾಗೂ ಪ್ರಶ್ನೆಗಳಿಗೆ ಸಂಬಂಧಿಸಿದ ಇಲಾಖೆಗಳು ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಹೇಳಿದ್ದಾರೆ.

ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ನಡೆಸುವ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಉಪ ಸಮಿತಿಗಳ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ, ಪ್ರತಿ ಗ್ರಾಮದ ಮಹಿಳೆಯರ ಅಂಕಿ-ಸಂಖ್ಯೆಯ ವಿವರಗಳನ್ನು ಸಂಗ್ರಹಿಸಿ ಮಹಿಳಾ ಗ್ರಾಮಸಭೆಯಲ್ಲಿ ಮಂಡಿಸಬೇಕು ಗ್ರಾಮಗಳಲ್ಲಿನ ಎಲ್ಲಾ ಸ್ವಸಹಾಯ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಸ್ವ-ಸಹಾಯ ಸಂಘಗಳ ಎಲ್ಲಾ ಸದಸ್ಯರು ಮಹಿಳಾ ಗ್ರಾಮ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಖಾತರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.
ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನದ 16 ವಾರಗಳ ಅವಧಿಯಲ್ಲಿ ವಾರಕ್ಕೊಂದರಂತೆ ಸಾಂಸ್ಕೃತಿಕ, ಮನರಂಜನೆ, ಕ್ರೀಡೆ, ಆರೋಗ್ಯ, ಪೌಷ್ಟಿಕಾಂಶ, ನೈರ್ಮಲ್ಯ, ಮಹಿಳಾ ಕಾನೂನುಗಳು ಮುಂತಾದ ವಿಷಯಗಳನ್ನು ಕಾರ್ಯಕ್ರಮಗಳನ್ನು ಆಯೋಜಿಸಲು ಸಚಿವರು ಸೂಚಿಸಿದ್ದಾರೆ. ಗ್ರಾಮಸಭೆ ನಡೆಸುವ ಸಮಯದಲ್ಲಿ ಆರೋಗ್ಯ ಶಿಬಿರ, ವಸ್ತು ಪ್ರದರ್ಶನ, ಸಸಿ ನೆಡುವ ಕಾರ್ಯಕ್ರಮ ಏರ್ಪಾಡು ಮಾಡಲು ಸಚಿವರು ಸಲಹೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment