Friday, May 15, 2026
Google search engine
Homeರಾಜ್ಯವಿಶ್ವದಾಖಲೆ ಬರೆದ ಕರ್ನಾಟಕದ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ!

ವಿಶ್ವದಾಖಲೆ ಬರೆದ ಕರ್ನಾಟಕದ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ!

ಕಾಂಗ್ರೆಸ್‌ ಪಕ್ಷದ ಮಹಾತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಮಾಡುವ ಶಕ್ತಿ ಯೋಜನೆ ವಿಶ್ವದಾಖಲೆಗೆ ಪಾತ್ರವಾಗಿದೆ.

ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ ಕೆಎಸ್ಸಾರ್ಟಿಸಿ, ಬಿಎಂಟಿಸಿ, ನೈರುತ್ಯ ಹಾಗೂ ವಾಯವ್ಯ ಸೇರಿದಂತೆ ನಾಲ್ಕೂ ನಿಗಮಗಳಲ್ಲಿ ಇದುವರೆಗೆ 500 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದಾರೆ. ಈ ಮೂಲಕ ಶಕ್ತಿ ಯೋಜನೆ ಪ್ರತಿಷ್ಠಿತ “ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​” (Golden Book of Record) ಸೇರ್ಪಡೆಯಾಗಿದೆ.

2023ರ ಜೂನ್ 11 ರಿಂದ 2025 ಜುಲೈ 25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್​ಗಳಲ್ಲಿ 5049476416 ಮಹಿಳೆಯರು (500 ಕೋಟಿ) ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣದಿಂದ ಶಕ್ತಿ ಯೋಜನೆ ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​​ನಲ್ಲಿ ಸ್ಥಾನ‌ ಪಡೆದಿದೆ.
Beyond Free Rides ಎಂಬ ಹೆಸರಿನಲ್ಲಿ Sustainable Mobility Network ವು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನ ನಡೆಸಿತು.

ಬೆಂಗಳೂರಿನಲ್ಲಿ ಶೇ.23 ರಷ್ಟು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಶೇ.21 ರಷ್ಟು ಹೆಚ್ಚು ಮಹಿಳಾ ಉದ್ಯೋಗಿಗಳು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಅಧ್ಯಯನ ವರದಿಯಲ್ಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಶಕ್ತಿ ಯೋಜನೆ ಜಾರಿಯಿಂದಾಗಿ ಇಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಿದೆ. ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಗೌರವ ಸಮರ್ಪಿಸುತ್ತೇನೆ.

ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ. ಈ ಚಾರಿತ್ರಿಕ ಸಾಧನೆಗೆ ಕಾರಣರಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್​ಡಬ್ಲೂಕೆಆರ್​ಟಿಸಿ ಹಾಗೂ ಕೆಕೆಆರ್​ಟಿಸಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ದಾಖಲೆ ನಿರ್ಮಿಸಿದ ಶಕ್ತಿ ಯೋಜನೆ

ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ಒದಗಿಸುತ್ತಿರುವ ಶಕ್ತಿ ಯೋಜನೆ ಜಾರಿಗೆ ಬಂದು ಎರಡು ವರ್ಷ ಕಳೆದಿದೆ. 2023ರ ಜೂನ್‌ 11 ರಂದು ಆರಂಭವಾಗಿದ್ದ ಈ ಯೋಜನೆಗೆ ಮಹಿಳೆಯರು ‌ಬಹುಪರಾಕ್ ಎಂದಿದ್ದಾರೆ. 2025ರ ಜುಲೈ 14ರವರೆಗೆ ನಾಲ್ಕೂ ನಿಗಮಗಳಲ್ಲಿ 500 ಕೋಟಿ ಮಹಿಳೆಯರು ಸಂಚಾರ ಮಾಡಿದ್ದರು. ನಾಲ್ಕೂ ನಿಗಮಗಳಲ್ಲಿ ಪ್ರತಿದಿನ ಅಂದಾಜು 80 ಲಕ್ಷಕ್ಕೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಟಿಕೆಟ್​ ಪಡೆದು ಪ್ರಯಾಣಿಸಿದ್ದರು.

ಬಿಎಂಟಿಸಿಯಲ್ಲಿ 157.33 ಕೋಟಿ, ಕೆಎಸ್​ಆರ್​ಟಿಸಿಯಲ್ಲಿ 151 ಕೋಟಿ, ಎನ್​ಡಬ್ಲೂಕೆಆರ್​ಟಿಸಿಯಲ್ಲಿ 117 ಕೋಟಿ ಮತ್ತು ಕೆಕೆಆರ್​ಟಿಸಿಯಲ್ಲಿ 72 ಕೋಟಿ ಮಹಿಳೆಯರು ಜುಲೈ 14ರವರೆಗೆ ಸಂಚಾರ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments