Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ಬೆಂಗಳೂರು

ಬಾಲಿವುಡ್ ಸ್ಟಾರ್ ನಟರ ಐಷಾರಾಮಿ ಕಾರಿಗೆ 38.26 ಲಕ್ಷ ರೂ. ತೆರಿಗೆ ಪಾವತಿಸಿದ ಕೆಜಿಎಫ್ ಬಾಬು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
kgf babu

ಬಾಲಿವುಟ್ ಸ್ಟಾರ್ ನಟರಿಂದ ಅವರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರಿಗೆ ಉದ್ಯಮಿ ಕೆಜಿಎಫ್ ಬಾಬು ಎಂದೇ ಖ್ಯಾತರಾದ 38.26 ಲಕ್ಷ ರೂ. ತೆರಿಗೆ ಪಾವತಿಸಿದ್ದಾರೆ.

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮತ್ತು ಅಮಿರ್ ಖಾನ್ ಅವರಿಂದ ಖರೀದಿಸಿದ್ದ ಎರಡು ಕಾರಿಗಳಿಗೆ ತೆರಿಗೆ ಪಾವತಿಸದ ಕಾರಣ ಬೆಂಗಳೂರಿನಲ್ಲಿ ಆರ್ ಟಿಒ ಅಧಿಕಾರಿಗಳು ದಾಳಿ ನಡೆಸಿ ಕಾರುಗಳನ್ನು ವಶಪಡಿಸಿಕೊಂಡಿತ್ತು.

ಬುಧವಾರ ಮಧ್ಯಾಹ್ನ ಆಮಿರ್‌ ಖಾನ್‌ರಿಂದ ಖರೀದಿಸಿದ್ದ ರೋಲ್ಸ್‌ ರಾಯ್ಸ್‌ ಕಾರಿಗೆ 19.73 ಲಕ್ಷ ರೂ. ಹಾಗೂ ಅಮಿತಾಬ್ ಬಚ್ಚನ್ ರಿಂದ ಖರೀದಿಸಿದ್ದ ರೋಲ್ಸ್‌ ರಾಯ್ಸ್‌ ಕಾರಿಗೆ 18.53 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ಮನೆ ಮೇಲೆ ಆರ್‌ಟಿಒ ಜಂಟಿ ಆಯುಕ್ತರಾದ ಶೋಭಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ಐಷಾರಾಮಿ ಕಾರುಗಳ ಟ್ಯಾಕ್ಸ್ ಕಟ್ಟದೇ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಕಾರುಗಳನ್ನು ಸೀಜ್ ಮಾಡಿತ್ತು.

ಅಮಿರ್ ಖಾನ್ ಹಾಗೂ ಅಮಿತಾಬ್ ಬಚ್ಚನ್‌ ಅವರಿಂದ ರೋಲ್ಸ್‌ ರಾಯ್ಸ್‌ ಕಾರುಗಳನ್ನು ಖರೀದಿಸಿದ್ದೆ. ಎರಡೂ ಕಾರುಗಳನ್ನು ಬಾಂಬೆಯಲ್ಲಿ ರಿಜೆಸ್ಟ್ರೇಷನ್‌ ಮಾಡಿಸಲಾಗಿತ್ತು. ಲೈಫ್‌ ಟ್ಯಾಕ್ಸ್‌ ಕೂಡ ಕಟ್ಟಲಾಗಿದೆ. ಕರ್ನಾಟಕದಲ್ಲೂ ಟ್ಯಾಕ್ಸ್ ಕಟ್ಟಬೇಕು ಅಂತ ಗೊತ್ತಿರಲಿಲ್ಲ. ಆರ್‌ಟಿಒ ಅಧಿಕಾರಿಗಳು ಈ ಬಗ್ಗೆ ಮನವರಿಕೆ ಮಾಡಿದ ನಂತ ತೆರಿಗೆ ಪಾವತಿಸಿದ್ದೇನೆ ಎಂದು ಬಾಬು ತಿಳಿಸಿದ್ದಾರೆ.

ಸಾರಿಗೆ ಇಲಾಖೆಯ ಜಂಟಿ ಆಯುಕ್ತೆ ಶೋಭಾ ಮಾತನಾಡಿ, ಮಹಾರಾಷ್ಟ್ರ ರಿಜಿಸ್ಟ್ರೇಷನ್ ಕಾರುಗಳು ಕರ್ನಾಟಕದಲ್ಲಿ ಸಂಚರಿಸುತ್ತಿವೆ ಎಂಬ ಮಾಹಿತಿ ಇತ್ತು. ಮಾಹಿತಿ ಹಿನ್ನೆಲೆ ನಾವು ಬಂದು ಪರಿಶೀಲನೆ ನಡೆಸಿದ್ದೇವೆ. ಟ್ಯಾಕ್ಸ್ ವಿಚಾರ ಗೊತ್ತಿರಲಿಲ್ಲ ಅಂದಾಗ ನಾವು ಎಲ್ಲಾ ಟ್ಯಾಕ್ಸ್ ಲೆಕ್ಕ ಮಾಡಿ ಹೇಳಿದ ಕೂಡಲೇ ಕೆಜಿಎಫ್ ಬಾಬು ಡಿಡಿ ಮೂಲಕ ಟ್ಯಾಕ್ಸ್ ಪಾವತಿಸಿದರು ಎಂದು ಮಾಹಿತಿ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment