ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ನೌಕರರು ಕೆಂಪು-ಹಳದಿ ಐಡಿ ಕಾರ್ಡ್ ಕಡ್ಡಾಯವಾಗಿ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈಗಾಗಲೇ ಸರ್ಕಾರಿ ನೌಕರರಿಗೆ ಸೂಚನೆ ನೀಡಿದ್ದರೂ ಸಮರ್ಪಕವಾಗಿ ಪಾಲಿಸದ ಕಾರಣ ಡಿಪಿಎಆರ್ ಇಲಾಖೆ ಕನ್ನಡ ಧ್ವಜದ ಬಣ್ಣದ ಗುರುತು ಚೀಟಿ ಧರಿಸುವುದು ಕಡ್ಡಾಯ ಎಂದು ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ನೌಕರರು ಕೆಂಪು- ಹಳದಿ ಬಣ್ಣದ ಐಡಿ ಕಾರ್ಡ್ ಧರಿಸುವ ನಿಯಮ ಪಾಲಿಸುವಂತೆ ಇಲಾಖೆಯ ಮುಖ್ಯಸ್ಥರು ಜವಾಬ್ದಾರಿ ವಹಿಸಿಕೊಳ್ಳುವಂತೆ ಇಲಾಖಾ ಮುಖ್ಯಸ್ಥರಿಗೆ ಸೂಚಿಸಿ ಬುಧವಾರ ಸುತ್ತೋಲೆ ಹೊರಡಿಸಲಾಗಿದೆ.