Saturday, August 15, 2026
Google search engine
Homeಕ್ರೀಡೆವಿರಾಟ್ ಕೊಹ್ಲಿ ದಾಖಲೆ ಮುರಿದು ಇತಿಹಾಸ ಬರೆದ ಕೆಎಲ್ ರಾಹುಲ್!

ವಿರಾಟ್ ಕೊಹ್ಲಿ ದಾಖಲೆ ಮುರಿದು ಇತಿಹಾಸ ಬರೆದ ಕೆಎಲ್ ರಾಹುಲ್!

ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಐಪಿಎಲ್ ನಲ್ಲಿ 5ನೇ ಶತಕ ಸಿಡಿಸಿದ್ದೂ ಅಲ್ಲದೇ ಟಿ-20 ಕ್ರಿಕೆಟ್ ನಲ್ಲಿ 8000 ರನ್ ಪೂರೈಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕೆಎಲ್ ರಾಹುಲ್ ಶತಕ ಸಿಡಿಸಿದರು. ಇದು ಅವರ 5ನೇ ಐಪಿಎಲ್ ಶತಕವಾಗಿದೆ. ಅಲ್ಲದೇ ಅತ್ಯಂತ ವೇಗವಾಗಿ 8000 ರನ್ ಪೂರೈಸಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

60 ಎಸೆತಗಳಲ್ಲಿ ಶತಕ ಪೂರೈಸಿದ ಕೆಎಲ್ ರಾಹುಲ್ 65 ಎಸೆತಗಳಲ್ಲಿ 14 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 112 ರನ್ ಬಾರಿಸಿ ಔಟಾಗದೇ ಉಳಿದರು. ರಾಹುಲ್ ಸಾಹಸದಿಂದ ಡೆಲ್ಲಿ ಕ್ಯಾಪಿಟಲ್ಸ್ 3 ವಿಕೆಟ್ ಗೆ 199 ರನ್ ಕಲೆ ಹಾಕಿತು.

ದಕ್ಷಿಣ ಆಫ್ರಿಕಾದ ಕಾಗಿಸೊ ರಬಡಾ ಅವರ ಓವರ್ ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ರಾಹುಲ್ ಟಿ-20 ಕ್ರಿಕೆಟ್ ನಲ್ಲಿ 8000 ರನ್ ಪೂರೈಸಿದರು. 224 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡುವ ಮೂಲಕ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ್ದ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದರು. ವಿರಾಟ್ ಕೊಹ್ಲಿ 243 ಪಂದ್ಯಗಳಲ್ಲಿ 8000 ರನ್ ಪೂರೈಸಿದ್ದರು.

ಈ ಸಾಧನೆಯೊಂದಿಗೆ ಕೆಎಲ್ ರಾಹುಲ್ ಟಿ-20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರ ಎಂಬ ದಾಖಲೆಗೆ ಪಾತ್ರರಾದರು. ವೆಸ್ಟ್ ಇಂಡೀಸ್ ನ ಕ್ರೀಸ್ ಗೇಲ್ (213 ಪಂದ್ಯ) ವಿರಾಟ್ ಕೊಹ್ಲಿ ಪಾಕಿಸ್ತಾನದ ಬಾಬರ್ ಅಜಮ್ (218) ನಂತರದ ಸ್ಥಾನದಲ್ಲಿದ್ದಾರೆ. ರಾಹುಲ್ ಟಿ-20ಯಲ್ಲಿ 5 ಶತಕ ಹಾಗೂ 69 ಅರ್ಧಶತಕ ಗಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments