ನೂತನ ಕೋಚ್ ಗೌತಮ್ ಗಂಭೀರ್ ಒತ್ತಡಕ್ಕೆ ಮಣಿದ ಬಿಸಿಸಿಐ ಆಯ್ಕೆ ಸಮಿತಿ, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಟ್ಟು ಭಾರತ ಟಿ-20 ಕ್ರಿಕೆಟ್ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದೆ.
ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಆಯ್ಕೆ ತಂಡದ ಕಸರತ್ತು ಗುರುವಾರ ಕೊನೆಗೂ ಅಂತಿಮ ತೀರ್ಮಾನಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದು, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಸೂರ್ಯಕುಮಾರ್ ಯಾದವ್ ಅವರಿಗೆ ನಾಯಕ ಪಟ್ಟ ನೀಡಿದೆ.
ಜಿಂಬಾಬ್ವೆ ಸರಣಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಶುಭಮನ್ ಗಿಲ್ ಅವರನ್ನು ಟಿ-20 ಮತ್ತು ಏಕದಿನ ತಂಡಗಳಿಗೆ ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಜಸ್ ಪ್ರೀತ್ ಬುಮ್ರಾ ಅವರಿಗೆ ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಆದರೆ ಕೊಹ್ಲಿ ಮತ್ತು ರೋಹಿತ್ ಗೆ ವಿಶ್ರಾಂತಿ ನೀಡಲಾಗಿಲ್ಲ.
ಕೆಎಲ್ ರಾಹುಲ್ ಅವರನ್ನು ಟಿ-20 ತಂಡದಿಂದ ಕೈಬಿಡಲಾಗಿದ್ದು, ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಅದೇ ರೀತಿ ಶ್ರೇಯಸ್ ಅಯ್ಯರ್ ಅವರನ್ನು ಟಿ-20 ತಂಡದಿಂದ ಕೈಬಿಟ್ಟರೂ ಏಕದಿನ ತಂಡದಲ್ಲಿ ಅವಕಾಶ ನೀಡಲಾಗಿದೆ.
ಭಾರತ ಟಿ-20 ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಶ್ನೋಯಿ, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮದ್ ಸಿರಾಜ್.
ಭಾರತ ಏಕದಿನ ತಂಡ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕುಲದೀಪ್ ಯಾದವ್, ಶಿವಂ ದುಬೆ, ಮೊಹಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಸರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.