Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ರಾಜ್ಯ

46 ಕೋಟಿ ಮೌಲ್ಯದ `ನಂದಿನಿ’ ಸಿಹಿ ಉತ್ಪನ್ನ ಮಾರಾಟ ಮಾಡಿ ಕೆಎಂಎಫ್ ಹೊಸ ದಾಖಲೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
kmf

ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ ಒಟ್ಟಾರೆ 46.00 ಕೋಟಿ ರೂ. ದಾಖಲೆಯ ವಹಿವಾಟು ನಡೆಸಿ ಮೈಲುಗಲ್ಲು ಸಾಧಿಸಿದೆ.

ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ.38 ರಷ್ಟು ವಹಿವಾಟು ಪ್ರಗತಿಯಾಗಿದ್ದು “ಇದು ಕೆ.ಎಂ.ಎಫ್ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆಯಾಗಿರುತ್ತದೆ ಎಂದು ಕೆಎಂಎಫ್ ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ ರೂ.33.48 ಕೋಟಿ ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1000 ಮೆಟ್ರಿಕ್ ಟನ್ ಮಾರಾಟ ಗುರಿ ನಿಗದಿಪಡಿಸಲಾಯಿತು.

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ.

ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್‌ಟಿ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. “ನಂದಿನಿ” ಬ್ರಾಂಡ್‌ನಡಿಯಲ್ಲಿ ಹಾಲಿನೊಂದಿಗೆ ತುಪ್ಪ, ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175ಕ್ಕೂ ಅಧಿಕ ಬಗೆಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ರಾಜ್ಯ, ನೆರೆರಾಜ್ಯಗಳು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ದೆಹಲಿ, ಅಸ್ಸಾಂ ಮತ್ತು ಕೆಲ ಹೊರದೇಶಗಳ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ.

ಹಾಲು ಮತ್ತು ಹಾಲಿನ ಉತ್ಪನ್ನಗಳ ಶುದ್ಧತೆ, ಗುಣಮಟ್ಟ ಮತ್ತು ಕೈಗೆಟುಕುವ ಬೆಲೆಯು “ನಂದಿನಿ” ಬ್ರಾಂಡ್ ಅನ್ನು ಗ್ರಾಹಕರ ವಿಶ್ವಾಸದ ಪ್ರತೀಕವನ್ನಾಗಿ ಮಾಡಿದೆ.

ಪ್ರತಿ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಿಹಿತಿನಿಸುಗಳಿಗೆ ರಾಜ್ಯದಾದ್ಯಂತ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಈ ಹಬ್ಬದ ಅವಧಿಯಲ್ಲಿ ನಂದಿನಿ ಬ್ರಾಂಡ್‌ನಡಿಯಲ್ಲಿ ಲಭ್ಯವಿರುವ 40 ಕ್ಕೂ ಹೆಚ್ಚು ಸಿಹಿ ಉತ್ಪನ್ನ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿತ ಸಿದ್ಧತೆ ಕೈಗೊಂಡಿತ್ತು. ಈ ಸಾಧನೆ “ನಂದಿನಿ” ಬ್ರಾಂಡ್‌ನ ಗುಣಮಟ್ಟ, ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ ಎಂದು ಕೆಎಂಫ್ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment