Sunday, June 21, 2026
Google search engine
Homeಕ್ರೀಡೆಇಂಗ್ಲೆಂಡ್ ಏಕದಿನ ಸರಣಿಗೆ ಕೊಹ್ಲಿ, ರೋಹಿತ್ ಮಣೆ; ಜೈಸ್ವಾಲ್ ಗೆ ಕೊಕ್!

ಇಂಗ್ಲೆಂಡ್ ಏಕದಿನ ಸರಣಿಗೆ ಕೊಹ್ಲಿ, ರೋಹಿತ್ ಮಣೆ; ಜೈಸ್ವಾಲ್ ಗೆ ಕೊಕ್!

ಮುಂಬೈ: ಹಿರಿಯ ಆಟಗಾರರಾದ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಅವರನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದ್ದು, ಶತಕ ಬಾರಿಸಿ ಭರ್ಜರಿ ಫಾರ್ಮ್ ನಲ್ಲಿರುವ ಯಶಸ್ವಿ ಜೈಸ್ವಾಲ್ ಅವರನ್ನು ಕೈಬಿಡಲಾಗಿದೆ.

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಭಾನುವಾರ 15 ಆಟಗಾರರ ತಂಡವನ್ನು ಪ್ರಕಟಿಸಿದ್ದು, ವಿರಾಟ್ ಕೊಹ್ಲಿಅವರನ್ನು ತಂಡದಲ್ಲಿ ಸ್ಥಾನ ನೀಡಿದ್ದರೂ ಬೆಂಗಳೂರಿನಲ್ಲಿ ಫಿಟ್ನೆಸ್ ಟೆಸ್ಟ್ ನಲ್ಲಿ ಪಾಸಾದ ನಂತರ ಕಣಕ್ಕಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಆಫ್ಘಾನಿಸ್ತಾನ ವಿರುದ್ಧದ ಮೂರನೇ ಪಂದ್ಯದಲ್ಲಿ ಸೇರಿದಂತೆ ಕಳೆದ ಮೂರು ಏಕದಿನ ಪಂದ್ಯದಲ್ಲಿ 2 ಶತಕ ಸಿಡಿಸಿರುವ ಯಶಸ್ವಿ ಜೈಸ್ವಾಲ್ ಅವರನ್ನು ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಆದರೆ ಆರಂಭಿಕ ಸ್ಥಾನಕ್ಕೆ ಜೈಸ್ವಾಲ್ ಬದಲು ಹಿರಿಯ ಆಟಗಾರ ರೋಹಿತ್ ಶರ್ಮ ಸ್ಥಾನ ಗಳಿಸಿದ್ದಾರೆ.

ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅವರನ್ನು ತಂಡದಲ್ಲಿ ಸ್ಥಾನ ನೀಡುವ ಮೂಲಕ ಸದ್ಯದ ಮಟ್ಟಿಗೆ ಇಬ್ಬರು ಹಿರಿಯ ಆಟಗಾರರ ನಿವೃತ್ತಿ ಬಗ್ಗೆ ಇದ್ದ ಗೊಂದಲವನ್ನು ಬಗೆಹರಿಸಲಾಗಿದೆ. ಆದರೆ ವಿಶ್ವಕಪ್ ವರೆಗೂ ಆಡುವ ಬಗ್ಗೆ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

2027ರ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಪೂರ್ಣ ಸಾಮರ್ಥ್ಯದ ತಂಡವನ್ನು ಪ್ರಕಟಿಸಲಾಗಿದೆ. 2023ರಿಂದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳದ ಜಸ್ ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. ಆಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಆಡಿದ್ದ ಪ್ರಿನ್ಸ್ ಯಾದವ್  ಸ್ಥಾನವನ್ನು ಬುಮ್ರಾ ತುಂಬಿದ್ದಾರೆ.

ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಮತ್ತು ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ರಿಷಭ್ ಪಂತ್ ಅವರನ್ನು ಮತ್ತೆ ಕಡೆಗಣಿಸಲಾಗಿದೆ.

ಭಾರತ ತಂಡ:

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿ.ಕೀ.), ಇಶಾನ್ ಕಿಶನ್ (ವಿ.ಕೀ.), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments