ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗುರುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಲವು ದಾಖಲೆ ಬರೆದಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಅರ್ಧಶತಕದ ಬಲ ನೀಡಿದ್ದೂ ಅಲ್ಲದೇ ಎರಡು ಅರ್ಧಶತಕಗಳ ಜೊತೆಯಾಟ ನಿಭಾಯಿಸಿದರು.
ವಿರಾಟ್ ಕೊಹ್ಲಿ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಕೊಹ್ಲಿ 42 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 70 ರನ್ ಸಿಡಿಸಿದರು. ಇದು ಐಪಿಎಲ್ 18ರಲ್ಲಿ ಕೊಹ್ಲಿ ತವರಿನಲ್ಲಿ ಬಾರಿಸಿದ ಮೊದಲ ಹಾಗೂ ಒಟ್ಟಾರೆ 4ನೇ ಅರ್ಧಶತಕವಾಗಿದೆ.
ಕೊಹ್ಲಿ ಬೆಂಗಳೂರಿನಲ್ಲಿ 3500 ರನ್ ಪೂರೈಸುವ ಮೂಲಕ ಟಿ-20 ಕ್ರಿಕೆಟ್ ನಲ್ಲಿ ಒಂದೇ ಮೈದಾನದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಮತ್ತೊಂದು ಗೌರವಕ್ಕೆ ಪಾತ್ರರಾದರು.
ಬೆಂಗಳೂರಿನಲ್ಲಿ ಹ್ಯಾಟ್ರಿಕ್ ಸೋಲುಂಡಿರುವ ಆರ್ ಸಿಬಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದು, ಮತ್ತೆ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಇದೇ ಮೊದಲ ಬಾರಿ ಬೃಹತ್ ಮೊತ್ತದ ಸೂಚನೆ ನೀಡಿದೆ.



