ಕೊಪ್ಪಳದ ಬಿಜೆಪಿ ಸಂಸದ ಕರಡಿ ಸಂಗಣ್ಣ ಬಿಜೆಪಿ ಹಾಗೂ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಲೋಕಸಭಾ ಸ್ಥಾನಕ್ಕೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರದ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಅವರಿಗೆ ಇ-ಮೇಲ್ ಮೂಲಕ ಸಂಸತ್ ಸ್ಥಾನಕ್ಕೂ ಕರಡಿ ಸಂಗಣ್ಣ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ.