Tuesday, September 29, 2026
Google search engine
Homeಕಾನೂನುಕೆಪಿಎಸ್‌ಸಿ ಅಕ್ರಮ ಪ್ರಕರಣ: ಕನ್ನಾಳೆ 14 ದಿನಗಳ ಕಾಲ ಇಡಿ ಕಸ್ಟಡಿಗೆ

ಕೆಪಿಎಸ್‌ಸಿ ಅಕ್ರಮ ಪ್ರಕರಣ: ಕನ್ನಾಳೆ 14 ದಿನಗಳ ಕಾಲ ಇಡಿ ಕಸ್ಟಡಿಗೆ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು 14 ದಿನ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಲಾಗಿದೆ.

ಇಡಿ ಅಧಿಕಾರಿಗಳು ಬಸವರಾಜ್ ಕನ್ನಾಳೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಬಸವರಾಜ್ ಕನ್ನಾಳೆಯನ್ನು 14 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.

ಡ್ರೈವರ್‌ ಹಣ ಸಂಗ್ರಹ:

ಆರೋಪಿ ಬಸವರಾಜ್ ಕನ್ನಾಳೆ ತನ್ನ ಡ್ರೈವರ್ ಮೂಲಕ ಅಭ್ಯರ್ಥಿಗಳಿಂದ ಹಣ ಸಂಗ್ರಹಿಸಿದ್ದಾನೆ ಎನ್ನಲಾಗಿದೆ. ಹಲವು ಅಭ್ಯರ್ಥಿಗಳಿಂದ ಪಡೆದಿದ್ದ ಹಣವನ್ನು ಡ್ರೈವರ್ ಮೂಲಕ ಕಳುಹಿಸಲಾಗುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮಂಜುನಾಥ್, ಪೂಜಾ, ಅಶ್ವಿನಿ ಕುಮಾರ್, ಸಂಗಮೇಶ್, ಪದ್ಮಾವತಿ ಹಾಗೂ ಹರೀಶ್ ಸೇರಿದಂತೆ ಹಲವರ ಹೆಸರಿನಲ್ಲಿ ಹಣದ ವಹಿವಾಟು ನಡೆದಿರುವುದು ತನಿಖೆಯಿಂದ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಲಕ್ಷಾಂತರ ವಹಿವಾಟು:

ಮಂಜುನಾಥ್, ಪೂಜಾ, ಅಶ್ವಿನಿ ಕುಮಾರ್, ಸಂಗಮೇಶ್ ಹಾಗೂ ಪದ್ಮಾವತಿ ಅವರಿಂದ ತಲಾ 10 ಲಕ್ಷ ರೂ. ಹಾಗೂ ಮೋಹನ್ ಕುಮಾರ್ ಅವರಿಂದ 5 ಲಕ್ಷ ರೂ. ಹಣ ಪಡೆದಿರುವ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಇದೇ ವೇಳೆ, 20ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪರೀಕ್ಷೆ/ನೇಮಕಾತಿಗೆ ಸಂಬಂಧಿಸಿದ ನೆರವು ನೀಡಲು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಕೆಲವು ವ್ಯವಸ್ಥೆ ಮಾಡಲಾಗಿತ್ತು ಎಂಬ ಅಂಶವೂ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಅಕ್ರಮ ನೇಮಕಾತಿಗೆ ಸಂಬಂಧಿಸಿದ ಹಣದ ಮೂಲ, ಅಭ್ಯರ್ಥಿಗಳೊಂದಿಗೆ ನಡೆದ ಸಂಪರ್ಕ ಹಾಗೂ ಇತರರ ಪಾತ್ರದ ಕುರಿತು ಇಡಿ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments