Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಕೆಎಸ್ ಡಿಎಲ್ ಗೆ 451 ಕೋಟಿ ಲಾಭ: ರಾಜ್ಯ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಹಸ್ತಾಂತರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
ksdl

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂ. ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭ ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment