Thursday, May 14, 2026
Google search engine
Homeರಾಜ್ಯಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಚಾಲಕ ಸೇರಿ ಇಬ್ಬರು ದುರ್ಮರಣ

ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಚಾಲಕ ಸೇರಿ ಇಬ್ಬರು ದುರ್ಮರಣ

ಬೆಂಗಳೂರು: ಕುರಿ, ಮೇಕೆ ತುಂಬಿದ್ದ ಲಾರಿಗೆ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಲಾರಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ನೆಲಮಂಗಲದ ಗುಂಡೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.

ಲಾರಿ ಚಾಲಕ ಸೀನಪ್ಪ (50), ನಜೀರ್ ಅಹ್ಮದ್ (36) ಮೃತರೆಂದು ಗುರುತಿಸಲಾಗಿದೆ.ಕುರಿ ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಬರುತ್ತಿದ್ದ ಲಾರಿ ಗುಂಡೇನಹಳ್ಳಿ ಬಳಿ ಪಂಚರ್ ಆಗಿತ್ತು.

ಲಾರಿ ಟಯರ್ ಪಂಚರ್ ಆಗಿ ರಸ್ತೆ ಬದಿ ಟಯರ್ ಬದಲಿಸುವ ವೇಳೆ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತೋರ್ವನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಈ ಘಟನೆಯು ನಸುಕಿನ ಜಾವ 3:30ರ ಸುಮಾರಿಗೆ ನಡೆದಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂವರಿಗೆ ಗಂಭೀರ ಗಾಯ:

ವೇಗ ಹಿನ್ನಲೆ ನಿಯಂತ್ರಣಕ್ಕೆ ಸಿಗದೆ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗೊಂಡ ಘಟನೆ ಹೆಸರಘಟ್ಟ ಸಮೀಪದ ತೋಟಗೆರೆಯಲ್ಲಿ ನಡೆದಿದೆ. ರಾಮದೇವನಹಳ್ಳಿಯ ರಾಕೇಶ್, ಕಾರ್ತಿಕ್ ಮತ್ತು ನವೀನ್​ಗೆ ಗಾಯಗಳಾಗಿದ್ದು, ಮೂವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments