Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ಕುಲದೀಪ್ ‘ಪ್ರಸಿದ್ಧ’ ದಾಳಿಗೆ ದ. ಆಫ್ರಿಕಾ 270ಕ್ಕೆ ಆಲೌಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು
quinton de cock

ಆರಂಭಿಕ ಕ್ವಿಂಟನ್ ಡಿಕಾಕ್ ಶತಕದ ಹೊರತಾಗಿಯೂ ಭಾರತದ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ 270 ರನ್ ಗೆ ಆಲೌಟಾಗಿದೆ.

ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು 47.5 ಓವರ್ ಗಳಲ್ಲಿ 270 ರನ್ ಗೆ ಆಲೌಟ್ ಮಾಡಿತು. ಭಾರತ ಸತತ 20 ಪಂದ್ಯಗಳಲ್ಲಿ ಟಾಸ್ ಸೋತ ನಂತರ ಇದೇ ಮೊದಲ ಬಾರಿಗೆ ಟಾಸ್ ಗೆದ್ದುಕೊಂಡಿದ್ದು ವಿಶೇಷವಾಗಿತ್ತು.

ದಕ್ಷಿಣ ಆಫ್ರಿಕಾ ತಂಡ ಖಾತೆ ತೆರೆಯುತ್ತಿದ್ದಂತೆ ರಿಯಾನ್ ರಿಕಲ್ಟನ್ (0) ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೆ ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ತೆಂಬಾ ಭವುಮಾ ಎರಡನೇ ವಿಕೆಟ್ ಗೆ 113 ರನ್ ಜೊತೆಯಾಟದಿಂದ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸುವ ಸೂಚನೆ ನೀಡಿದರು.

ಆದರೆ ಬುವುಮಾ 67 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡ 48 ರನ್ ಗಳಿಸಿದ್ದಾಗ ಜಡೇಜಾ ಎಸೆತದಲ್ಲಿ ಔಟಾಗುತ್ತಿದ್ದಂತೆ ತಂಡ ನಾಯಕೀಯ ಕುಸಿತಕ್ಕೆ ಒಳಗಾಯಿತು. ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಏಕಾಂಗಿ ಹೋರಾಟ ನಡೆಸಿದ ಕ್ವಿಂಟನ್ ಡಿಕ್ 89 ಎಸೆತಗಳಲ್ಲಿ 8 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 106 ರನ್ ಸಿಡಿಸಿ ಶತಕದ ಗೌರವಕ್ಕೆ ಪಾತ್ರರಾದರು.

ಈ ಹಂತದಲ್ಲಿ ಮಾರಕ ದಾಳಿ ಸಂಘಟಿಸಿದ ಪ್ರಸಿದ್ಧ ಕೃಷ್ಣ ಮತ್ತು ಕುಲದೀಪ್ ಯಾದವ್ ಬ್ಯಾಟ್ಸ್ ಮನ್ ಗಳು ಬಾಲ ಬಿಚ್ಚದಂತೆ ನೋಡಿಕೊಂಡರು. ಭಾರತದ ಪರ ಪ್ರಸಿದ್ಧ ಕೃಷ್ಣ ಮತ್ತು ಕುಲದೀಪ್ ಯಾದವ್ ತಲಾ 4 ವಿಕೆಟ್ ಪಡೆದು ಗಮನ ಸೆಳೆದರೆ, ರವೀಂದ್ರ ಜಡೇಜಾ ಮತ್ತು ಅರ್ಷದೀಪ್ ತಲಾ 1 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment