ಮಂಡ್ಯ, ಹಾಸನ ಮತ್ತು ಕೋಲಾರದಿಂದ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದ ಸುಮಲತಾ ಅಂಬರೀಷ್ ಗೆ ಆಘಾತ ಉಂಟಾಗಿದೆ.
ಬೆಂಗಳೂರಿನಲ್ಲಿ ಸೋಮವಾರ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ ಎಂದು ಅಧಿಕೃತವಾಗಿ ಘೋಷಿಸಿದರು.
ನಮ್ಮ ಉದ್ದೇಶ ಇರೋದು ಕಾಂಗ್ರೆಸ್ ಅವರು ಜೆಡಿಎಸ್ ಮುಗಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದು. ನಮ್ಮ ಸಹಕಾರ ಇರೋ ರೀತಿ ಬಿಜೆಪಿಯಿಂದಲೂ ಸಹಕಾರ ಇರಬೇಕು. ಅದನ್ನ ಸರಿ ಮಾಡೋ ನಿಟ್ಟಿನಲ್ಲಿ ಕೆಲವು ಸೂಚನೆ ಬಿಜೆಪಿ ಅವರಿಗೆ ನೀಡಬೇಕು ಎಂಬ ಸಲಹೆ ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.
ಎರಡು ಪಕ್ಷದ ನಾಯಕರ ಸಭೆಗಳು, ಚುನಾವಣೆ ಪ್ರಚಾರದಲ್ಲಿ ಎರಡು ಪಕ್ಷಗಳು ಹೇಗೆ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಹೇಗೆ ಕಾರ್ಯಕರ್ತರು ಕೆಲಸ ಮಾಡಬೇಕು ಅಂತ ಸಲಹೆ ಕೊಡಬೇಕು ಅಂತ ಹೇಳಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ಚುನಾವಣಾ ಉಸ್ತುವಾರಿಗಳು ಮತ್ತು ಜಿಲ್ಲಾ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
18 ಕ್ಷೇತ್ರಗಳಲ್ಲಿ JDS ಮತಗಳಲ್ಲಿ ಶೇ.3ರಿಂದ 4ರಷ್ಟು ಬಿಜೆಪಿಗೆ ಸ್ವಿಂಗ್ ಆದರೆ 18 ಕ್ಷೇತ್ರ ಬಿಜೆಪಿ ಗೆಲ್ಲಲಿದೆ. ನಮ್ಮ ಪಕ್ಷದ ದುಡಿಮೆ ಬಿಜೆಪಿಗೆ ಅನುಕೂಲ ಆಗುತ್ತದೆ. ಇದನ್ನ ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಅಂತ ಹೇಳಿದ್ದಾರೆ. ಸರಿಯಾಗಿ ನಮ್ಮನ್ನ ಬಳಿಕೆ ಮಾಡಿಕೊಳ್ಳಲಿ. ಇಲ್ಲದೆ ಹೋದರೆ ಮುಂದೆ ಪೆಟ್ಟು ಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿ ಜವಾಬ್ದಾರಿ ಆಗಲಿದೆ ಎಂದು ಹೇಳಿದರು.