Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಮನರಂಜನೆ

ಕುಂಕುಮ್ ಭಾಗ್ಯ ಧಾರವಾಹಿ ನಟಿ 22ನೇ ವಯಸ್ಸಿಗೆ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
actress sanchita

ಖ್ಯಾತ ಕುಂಕುಮ್​ ಭಾಗ್ಯ ಹಿಂದಿ ಧಾರಾವಾಹಿಯಲ್ಲಿ ನಟಿಸಿದ್ದ ಕಿರುತೆರೆ ನಟಿ ಸಂಚಿತಾ ಉಗಾಲೆ 22ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜೂನ್ 14ರಂದು ಮಹಾರಾಷ್ಟ್ರದ ನಲಸೋಪರಾದ ಆಚೋಲೆ ಗ್ರಾಮದ ಸಾಯಿ ಸಂತೋಷಿ ಕಟ್ಟಡದಲ್ಲಿರುವ ತಮ್ಮ ನಿವಾಸದಲ್ಲಿ ಸಂಚಿತಾ ಉಗಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಾ ಥಮಿಕ ವರದಿಗಳ ಪ್ರಕಾರ ನಟಿ ಸಂಜೆ 7:00 ರಿಂದ 7:30ರ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ತಿಳಿದ ಕುಟುಂಬ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ನಟಿಯನ್ನು ವಸೈ-ವಿರಾರ್ ಮುನ್ಸಿಪಲ್ ಆಸ್ಪತ್ರೆಗೆ ಕರೆದೊಯ್ದರು. ಆದರೆ  ವೈದ್ಯರು ನಟಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.

ಚಿತಾ ಅವರ ತಂದೆ ಮಚ್ಚಿಂದ್ರ ಉಗಾಲೆ  ಸಲ್ಲಿಸಿದ ದೂರಿನ ಆಧಾರದ ಮೇಲೆ, ಆಚೋಲೆ ಪೊಲೀಸರು ಇಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಅಸಹಜ ಸಾವು ವರದಿ (ADR) ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ಎಲ್ಲಾ ಆಯಾಮಗಳಿಂದಲೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಿತಾ ಉಗಾಲೆ ತಮ್ಮ ಕಿರಿವಯಸ್ಸಿನಲ್ಲೇ ಮನರಂಜನಾ ಉದ್ಯಮದಲ್ಲಿ ಗುರುತಿಸಿಕೊಂಡಿದ್ದು, ಉನ್ನತ ಮಟ್ಟಕ್ಕೇರುವ ಹಾದಿಯಲ್ಲಿದ್ದರು. ಝೀ ಟಿವಿಯಲ್ಲಿ ದೀರ್ಘವಾದಿ ಪ್ರಸಾರ ಕಂಡಿದ್ದ ಕುಂಕುಮ್ ಭಾಗ್ಯದಲ್ಲಿ ದಿಯಾ ಟಂಡನ್ ಪಾತ್ರದಲ್ಲಿ ನಟಿಸುವ ಮೂಲಕ ಮನ್ನಣೆ ಗಳಿಸಿದರು.

ಕುಂಕುಮ್ ಭಾಗ್ಯದ ಹೊರತಾಗಿ, ಸಂಚಿತಾ ವಾಗ್ಲೆ ಕಿ ದುನಿಯಾದಲ್ಲಿಯೂ ಕಾಣಿಸಿಕೊಂಡರು. ಇಲ್ಲಿ ರುಚಿತಾ ಜೇಟ್ಲಿ ಪಾತ್ರವನ್ನು ನಿರ್ವಹಿಸಿದ್ದರು. ನಂತರ ಅವರು ದಂಗಲ್ ಟಿವಿಯ ದಿಲ್ವಾಲಿ ದುಲ್ಹಾ ಲೇ ಜಾಯೇಗಿಯಲ್ಲಿ ಸೊರಬ್ ಬೇಡಿ ಜೊತೆ ಸುಕೂನ್ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು.

ಕಿರುತೆರೆ ಧಾರವಾಹಿ ಅಲ್ಲದೇ ಕೆಲ ಸಿನಿಮಾ ಮತ್ತು ಒಟಿಟಿ ಪ್ರಾಜೆಕ್ಟ್​ಗಳಲ್ಲಿಯೂ ಸಂಚಿತಾ ಕಾಣಿಸಿಕೊಂಡಿದ್ದಾರೆ. ಬಾಲಿವುಡ್​ ಸೂಪರ್ ಸ್ಟಾರ್ ವಿಕ್ಕಿ ಕೌಶಲ್ ಮುಖ್ಯಭೂಮಿಕೆಯ ಹಿಸ್ಟಾರಿಕಲ್​ ಡ್ರಾಮಾ ‘ಛಾವಾ’ದಲ್ಲಿ ತಾರಾ ರಾಣಿಯ ಕಿರಿಯ ಆವೃತ್ತಿಯನ್ನು ಚಿತ್ರಿಸಿದ್ದಾರೆ. ಮನೋಜ್ ಬಾಜಪೇಯಿ ನಟಿಸಿದ ‘ಸೈಲೆನ್ಸ್ 2: ದಿ ನೈಟ್ ಔಲ್ ಬಾರ್’ ಶೂಟೌಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment