Tuesday, October 13, 2026
Google search engine
Homeದೇಶರಾಜ್ಯಸಭೆ, ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ

ರಾಜ್ಯಸಭೆ, ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ

ನವದೆಹಲಿ: ಕೇಂದ್ರ ರಾಜ್ಯ ಸಚಿವ ಸ್ಥಾನ ಹಾಗೂ ರಾಜ್ಯಸಭಾ ಸ್ಥಾನಗಳಿಗೆ ತಮಿಳಿನಾಡಿನ ಎಲ್ ಮುರುಗನ್ ರಾಜೀನಾಮೆ ನೀಡಿದ್ದಾರೆ.

2028ರ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವುದು ಹಾಗೂ ಪಕ್ಷವನ್ನು ಬಲಪಡಿಸಲು ಪೂರ್ಣಾವಧಿ ತೊಡಗಿಸಿಕೊಳ್ಳುವ ಉದ್ದೇಶದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸಿದ್ದೇವೆ ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನೀಟ್ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು. ಇದೀಗ ಎಲ್ ಮುರುಗನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ವಿಷಯವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸ್ವತಃ ಅವರೇ ಈ ವಿಷಯವನ್ನು ದೃಢಪಡಿಸಿದ್ದು, “ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಮಾತೆ ಮತ್ತು ತಮಿಳುನಾಡಿಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವವಾಗಿದೆ” ಎಂದು ತಿಳಿಸಿದ್ದಾರೆ.

ದಿನಗೂಲಿ ಮಗನಾದ ನನಗೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಜೀವನದ ಅತ್ಯಂತ ದೊಡ್ಡ ಸೌಭಾಗ್ಯ, ಎಂದು ಅವರು ಹೇಳಿಕೊಂಡಿದ್ದಾರೆ.

2029ರ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳುವ ಸಲುವಾಗಿ, ತಾವು ಈಗ “ತಳಮಟ್ಟದ ಕಾರ್ಯಕ್ಷೇತ್ರಕ್ಕೆ ಮರಳಲು” ಬಯಸುವುದಾಗಿ ಕೇಂದ್ರ ಸಚಿವರು ತಿಳಿಸಿದರು.

ಎಲ್. ಮುರುಗನ್ ಬಿಜೆಪಿಯ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷರಾಗಿದ್ದು, ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ರಾಜ್ಯಸಭೆಯಲ್ಲಿ ಅವರ ಅಧಿಕಾರಾವಧಿಯು 2030ರಲ್ಲಿ ಕೊನೆಗೊಳ್ಳಬೇಕಿತ್ತು, ಆದರೆ ತಮ್ಮ ರಾಜೀನಾಮೆ ಪತ್ರದಲ್ಲಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಅವರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments