ಭಾರತದ ಸ್ಟಾರ್ ಆಟಗಾರ ಲಕ್ಷ್ಯ ಸೇನ್ ಒಲಿಂಪಿಕ್ಸ್ ನ ಪುರುಷರ ವಿಭಾಗದ ಸಿಂಗಲ್ಸ್ ನಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಇತಿಹಾಸ ಬರೆದಿದ್ದಾರೆ.
ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲಕ್ಷ್ಯ ಸೇನ್ 19-21, 21-15, 21-12 ಸೆಟ್ ಗಳ ರೋಚಕ ಹಣಾಹಣಿಯಲ್ಲಿ ಚೀನಾದ ಚು ಟಿಯಾನ್ ಚೆನ್ ಅವರನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದರು.
ಪುರುಷರ ಸಿಂಗಲ್ಸ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಲಕ್ಷ್ಯ ಸೇನ್ ಪಾತ್ರರಾಗಿದ್ದಾರೆ. ಅಲ್ಲದೇ ಬ್ಯಾಡ್ಮಿಂಟನ್ ವಿಭಾಗದ ಸಿಂಗಲ್ಸ್ ನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಎನಿಸಿಕೊಂಡಿದ್ದಾರೆ. ಈಗಾಗಲೇ ಪಿವಿ ಸಿಂಧು ಮತ್ತು ಸೈನಾ ನೆಹವಾಲ್ ಈ ಸಾಧನೆ ಮಾಡಿದ್ದು, ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಮೊದಲ ಸೆಟ್ ನಲ್ಲಿ ಸೋಲುಂಡರೂ ಛಲ ಬಿಡದೇ ಅಮೋಘ ಹೋರಾಟ ನಡೆಸಿದ ಲಕ್ಷ್ಯ ಸೇನ್ ನಂತರ ಎರಡೂ ಸೆಟ್ ಗಳಲ್ಲಿ ರೋಚಕ ಗೆಲುವು ಕಂಡು ಸೆಮಿಫೈನಲ್ ಪ್ರವೇಶಿಸಿದರು. ಇದೀಗ ಪದಕ ಗೆಲ್ಲಲು ಲಕ್ಷ್ಯ ಸೇನ್ ಗೆ ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿದೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪಾರುಪಳ್ಳಿ ಕಶ್ಯಪ್ (2012) ಮತ್ತು ಕಿಡಂಬಿ ಶ್ರೀಕಾಂತ್ (2016) ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದೇ ಗರಿಷ್ಠ ಸಾಧನೆಯಾಗಿತ್ತು. ಲಕ್ಷ್ಯ ಸೇನ್ ಈ ದಾಖಲೆಯನ್ನು ಮುರಿದು ಸೆಮಿಫೈನಲ್ ಪ್ರವೇಶಿಸುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.