Friday, September 20, 2024
Google search engine
Homeತಾಜಾ ಸುದ್ದಿಟ್ಯಾಂಕರ್ ಗೆ ಗುದ್ದಿದ ಕಾರು: 10 ಮಂದಿ ದುರ್ಮರಣ

ಟ್ಯಾಂಕರ್ ಗೆ ಗುದ್ದಿದ ಕಾರು: 10 ಮಂದಿ ದುರ್ಮರಣ

ಟ್ಯಾಂಕರ್ ಗೆ ಹಿಂಬದಿಯಿಂದ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿ 10 ಮಂದಿ ಮೃತಪಟ್ಟ ದಾರುಣ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ.

ಅಹಮದಾಬಾದ್ –ವಡೋದರಾ ಎಕ್ಸ್ ವೇನಲ್ಲಿ ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ 8 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments