Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಏರ್ ಇಂಡಿಯಾ ತಿರುಚನಾಪಳ್ಳಿಯಲ್ಲಿ ತುರ್ತು ಭೂಸ್ಪರ್ಶ: 140 ಪ್ರಯಾಣಿಕರು ಪಾರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
air india
air india

ಹಾರಾಟದ ವೇಳೆ ಹೈಡ್ರೋಲಿಕ್ ವೈಫಲ್ಯಕ್ಕೆ ಒಳಗಾದ ಏರ್ ಇಂಡಿಯಾ ವಿಮಾನ ತಮಿಳುನಾಡಿನ ತಿರುಚನಾಪಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, 140 ಪ್ರಯಾಣಿಕರು ಪಾರಾಗಿದ್ದಾರೆ.

ತಿರುಚನಾಪಳ್ಳಿಯಿಂದ ಶಾರ್ಜಾಕ್ಕೆ ಶುಕ್ರವಾರ ಸಂಜೆ 5.40ರ ಸುಮಾರಿಗೆ ಹೊರಟ್ಟಿದ್ದ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಯಿತು. ಪೈಲೆಟ್ ಗಳು ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು.

ವಿಮಾನದ ಹೈಡ್ರೋಲಿಕ್ ವಿಫಲಗೊಂಡಿದೆ ಎಂದು ಪೈಲೆಟ್ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ವಿಮಾನ ಇಳಿಸಲು ವ್ಯವಸ್ಥೆ ಮಾಡಲಾಗಿತ್ತು ಎಂದು ತಿರುಚನಾಪಳ್ಳಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದರು.

ಹೈಡ್ರೋಲಿಕ್ ಅಂದರೆ ವಿಮಾನ ಹಾರಾಟದ ವೇಳೆ ಬ್ರೇಕ್, ಗೇರ್ ಮುಂತಾದವುಗಳು ಸುಲಲಿತವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ. ಹೈಡ್ರೋಲಿಕ್ ವ್ಯವಸ್ಥೆ ಹಾಳಾದರೆ ವಿಮಾನ ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸಮಸ್ಯೆ ಉಂಟಾಗಿ ಅನಾಹುತಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇರುತ್ತದೆ.

ಪೈಲೆಟ್ ಸಮಸ್ಯೆಯನ್ನು ಗಮನಕ್ಕೆ ತಂದ ನಂತರ ವಿಮಾನದಲ್ಲಿದ್ದ ಇಂಧನ ಖಾಲಿ ಮಾಡಲು ಸೂಚಿಸಿದ್ದರಿಂದ ಸುಮಾರು 3 ಗಂಟೆಗಳ ಆಕಾಶದಲ್ಲಿ ಗಿರಕಿ ಹೊಡೆದು ರಾತ್ರಿ 8.45ರ ಸುಮಾರಿಗೆ ತಿರುಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment