Home ತಾಜಾ ಸುದ್ದಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 16 ಮಂದಿ ಸಿಲುಕಿರುವ ಶಂಕೆ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 16 ಮಂದಿ ಸಿಲುಕಿರುವ ಶಂಕೆ

by Editor
0 comments
building

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದಾರೆ.

ಹೆಣ್ಣೂರು ಬಳಿಯ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಹೊರರಾಜ್ಯದಿಂದ ಬಂದಿರುವ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಕೆಜೆ ಜಾರ್ಜ್ ಕೂಡ ಭೇಟಿ ನೀಡಿ ಪರಿಹಾರ ಕಾರ್ಯದ ಪರಿಶೀಲನೆ ನಡೆಸಿದ್ದಾರೆ.

6 ಅಂತಸ್ತಿನ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಮಂಗಳವಾರ ಸಂಜೆ ವೇಳೆಗೆ ಕಾಮಗಾರಿ ನಡೆಯುವಾಗಲೇ ಕುಸಿದು ಬಿದ್ದಿದೆ. ಕಟ್ಟಡದಲ್ಲಿದ್ದ ಹಲವು ಕಾರ್ಮಿಕರು ಓಡಿ ಬಂದು ಜೀವ ರಕ್ಷಿಸಿಕೊಂಡಿದ್ದು, ಇನ್ನೂ ಕೆಲವರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಸಿಬ್ಬಂದಿ ಒಬ್ಬ ಕಾರ್ಮಿಕನನ್ನು ರಕ್ಷಿಸಿದ್ದಾರೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ