Monday, September 16, 2024
Google search engine
Homeತಾಜಾ ಸುದ್ದಿಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: 4ಕ್ಕೇರಿದ ಸಾವಿನ ಸಂಖ್ಯೆ

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: 4ಕ್ಕೇರಿದ ಸಾವಿನ ಸಂಖ್ಯೆ

ಉತ್ತರ ಪ್ರದೇಶದ ಗೋಂಡಾ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದ್ದರಿಂದ ಕನಿಷ್ಠ ನಾಲ್ವರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ.

ಚಂಡೀಗಢ- ದಿಬ್ರುಗಢ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಗುರುವಾರ ಸಂಭವಿಸಿದೆ. ಬುಧವಾರ ರಾತ್ರಿ 11,.30 ಗಂಟೆಗೆ ಚಂಡೀಗಢದಿಂದ ಹೊರಟ್ಟಿದ್ದ ರೈಲು ಅಸ್ಸಾಂನ ದಿಬ್ರುಗಢಕ್ಕೆ ತೆರಳುವ ಮಾಧ್ಯಮಧ್ಯದಲ್ಲಿ ರೈಲು ಹಳಿ ತಪ್ಪಿದೆ. 12 ಬೋಗಿಗಳು ಹಳಿ ತಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ.

ರೈಲು ಹಳಿ ತಪ್ಪಿದ್ದರಿಂದ ಹಲವಾರು ರೈಲುಗಳ ಸಂಚಾರದಲ್ಲಿ ವ್ಯತ್ಯಯಗೊಂಡಿದ್ದು, 2 ರೈಲು ಸಂಚಾರ ರದ್ದುಗೊಳಿಸಲಾಗಿದ್ದು, 11 ರೈಲು ಮಾರ್ಗಗಳನ್ನು ಬದಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿ ತೆರಳಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments