Friday, May 17, 2024
Google search engine
Homeಕಾನೂನುತೆರಿಗೆ ವಿವಾದ: ರಾಜ್ಯಗಳ ಸಮಸ್ಯೆ ಬಗೆಹರಿಸಲು ಕೇಂದ್ರಕ್ಕೆ 2 ವಾರ ಗಡುವು

ತೆರಿಗೆ ವಿವಾದ: ರಾಜ್ಯಗಳ ಸಮಸ್ಯೆ ಬಗೆಹರಿಸಲು ಕೇಂದ್ರಕ್ಕೆ 2 ವಾರ ಗಡುವು

ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ವಿವಾದ ಬಗೆಹರಿಸಿಕೊಳ್ಳಲು ಕೇಂದ್ರಕ್ಕೆ 2 ವಾರಗಳ ಗಡುವು ನೀಡಿದೆ.

ತೆರಿಗೆ ಪಾಲಿನ ಹಕ್ಕನ್ನು ಮಂಡಿಸಿ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆಯನ್ನು ಮುಂದೂಡಿದೆ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಬೇಕು. ಆದರೆ ತೆರಿಗೆ ವಿಷಯದಲ್ಲಿ ಆಗುತ್ತಿರುವ ತಾರತಮ್ಯವನ್ನು ಎರಡೂ ರಾಜ್ಯಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸೂಚಿಸಿತು.

ನೋಟಿಸ್ ನೀಡದಂತೆ ಸಾಲಿಸಿಟರ್ ಜನರಲ್ ಮನವಿ ಮಾಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರಕ್ಕೆ 2 ವಾರಗಳ ಗಡುವು ನೀಡಿದ್ದು, ಕೇಂದ್ರ ಹಾಗೂ ರಾಜ್ಯಗಳ ನಡುವೆ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ. ಆದ್ದರಿಂದ ರಾಜ್ಯಗಳ ತೆರಿಗೆ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದೆ.

ಕರ್ನಾಟಕದ ಪರ ಹಿರಿಯ ವಕೀಲ ಕಪಿಲ್ ಸಿಬಾಲ್ ವಾದ ಮಂಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments