ಐಪಿಎಲ್ ಟಿ-20 ಟೂರ್ನಿಯ 2025ನೇ ಆವೃತ್ತಿಯ ಹರಾಜು ಪ್ರಕ್ರಿಯೆ ರಿಯಾದ್ ನಲ್ಲಿ ನವೆಂಬರ್ 24 ಮತ್ತು 25ರಂದು ನಡೆಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.
ಸೌದಿ ಅರೆಬಿಯಾದ ರಿಯಾದ್ ನಲ್ಲಿ ಹರಾಜು ಪ್ರಕ್ರಿಯೆ ನಡೆಸಲು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಮೂಲಕ ವಿದೇಶದಲ್ಲಿ ಈ ಬಾರಿ ಹರಾಜು ಪ್ರಕ್ರಿಯೆ ನಡೆಯಲಿದೆ. ಆದರೆ ದಿನಾಂಕ ಪ್ರಸ್ತಾಪಿಸಲಾಗದ್ದು, ಅಂತಿಮ ತೀರ್ಮಾನ ಕೈಗೊಂಡಿಲ್ಲ.
ನವೆಂಬರ್ 22ರಿಂದ 26ರವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ಆಡಳಿತ ಮಂಡಳಿ ಹರಾಜು ದಿನಾಂಕ ನಿಗದಿ ಕುರಿತು ಗೊಂದಲಕ್ಕೆ ಒಳಗಾಗಿದೆ. ಏಕೆಂದರೆ ಹರಾಜು ಪ್ರಕ್ರಿಯೆಯಲ್ಲಿ ಕೆಲವು ಆಟಗಾರರು ಕೂಡ ಫ್ರಾಂಚೈಸಿಗಳ ಪರ ಆಗಮಿಸುವ ಸಾಧ್ಯತೆ ಇದೆ.
ಐಪಿಎಲ್ ಪಂದ್ಯಗಳ ನೇರ ಪ್ರಸಾರ ಹಕ್ಕನ್ನು ಡಿಸ್ನಿ ಪಡೆದಿದ್ದು, ಯಾವುದೇ ಕೊರತೆ ಗೊಂದಲಕ್ಕೆ ಅವಕಾಶ ಮಾಡಿಕೊಡುವಂತಿಲ್ಲ. ಇದರಿಂದ ಆದಾಯಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ.
ಈ ಬಾರಿ ಐಪಿಎಲ್ ಹರಾಜು ಪ್ರಕ್ರಿಯೆ ತೀವ್ರ ಕುತೂಹಲ ಮೂಡಿಸಿದ್ದು, ಕೆಎಲ್ ರಾಹುಲ್, ರಿಷಭ್ ಪಂತ್, ಫಾಫ್ ಡು ಪ್ಲೆಸಿಸ್, ಮ್ಯಾಕ್ಸ್ ವೆಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್ ಸೇರಿದಂತೆ ಹಲವು ಪ್ರಮುಖ ಭಾರತೀಯ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.