Home ತಾಜಾ ಸುದ್ದಿ ವಿಫಲ ಕೊಳವೆ ಬಾವಿ ಮುಚ್ಚದಿದ್ದರೆ 25 ಸಾವಿರ ರೂ.ದಂಡ, 1 ವರ್ಷ ಜೈಲು ಮಸೂದೆಗೆ ಅಂಗೀಕಾರ

ವಿಫಲ ಕೊಳವೆ ಬಾವಿ ಮುಚ್ಚದಿದ್ದರೆ 25 ಸಾವಿರ ರೂ.ದಂಡ, 1 ವರ್ಷ ಜೈಲು ಮಸೂದೆಗೆ ಅಂಗೀಕಾರ

ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

by Editor
0 comments
N.S.Boseraju

ಬೆಳಗಾವಿ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್‌ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು ಇಂದು ವಿಧಾನಸಭೇಯಲ್ಲಿ ಅಂಗೀಕಾರವಾಗಿದೆ.

15 ದಿನಗಳ ಮುಂಚಿತವಾಗಿ ಮಾಹಿತಿ ಕಡ್ಡಾಯ

banner

ಮಸೂದನೆಯ 11 ಏ ಸೆಕ್ಷನ್‌ ಪ್ರಕಾರ ಅಧಿಸೂಚಿತ ಪ್ರದೇಶ ಮತ್ತು ಅಧಿಸೂಚಿತವಲ್ಲದ ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಯಲು ಇಚ್ಚಿಸುವವರು ಸಂಬಂಧಪಟ್ಟ ಪಿಡಿಓ, ವಿಲೇಜ್‌ ಅಕೌಂಟೆಂಟ್‌, ಪಟ್ಟಣ ಪಂಚಾಯಿತಿ, ನಗರ ಸಭೆ ಮತ್ತು ಬಿಡಬ್ಲೂಎಸ್‌ಎಸ್‌ಬಿ ಸಂಬಂಧಿಸಿದ ವಾರ್ಡ್‌ ಇಂಜಿನೀಯರ್‌ಗಳಿಗೆ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದ ಡ್ರಿಲ್ಲಿಂಗ್‌ ಏಜೆನ್ಸಿ/ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ ಐದು ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಮೂರು ತಿಂಗಳ ಸಜೆಯನ್ನು ವಿಧಿಸಲಾಗುವುದು.

 ವಿಫಲ ಕೊಳವೆ ಬಾವಿ ಮುಚ್ಚುವುದು ಕಡ್ಡಾಯ:

ಕೊಳವೆ ಬಾವಿಗಳನ್ನು ಕೊರೆದ ನಂತರ ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿಗಳನ್ನು ಸ್ಟೀಲ್‌ ಕ್ಯಾಪ್‌ ಹಾಕಿ ಮುಚ್ಚವುದು ಕಡ್ಡಾಯವಾಗಿದೆ. ವಿಫಲ ಕೊಳವೆ ಬಾವಿಯನ್ನು ಕೆಸರು ಮಣ್ಣು ತುಂಬಿ ಮುಚ್ಚಬೇಕು ಹಾಗೂ 2×2 ಅಡಿಯ ದಿಬ್ಬ ಮಾಡಿ ದಿಬ್ಬಕ್ಕೆ ಫೆನ್ಸಿಂಗ್. ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿ ಕೊರೆದ 24 ಗಂಟೆಯೊಳಗೆ ಮುಚ್ಚಿರುವ ಬಗ್ಗೆ ಫೋಟೋ ತಗೆದು ಸುರಕ್ಷಿತವಾಗಿ ಮುಚ್ಚಿರುವುದನ್ನು ತಪಾಸಣೆ ಮಾಡಿ ಧೃಢೀಕರಿಸಬೇಕು. ಈ ಬಗ್ಗೆ ಜಾಯಿಂಟ್‌ ಡಿಕ್ಲರೇಷನ್‌ ಅನ್ನು ಸ್ಥಳೀಯ ಪ್ರಾಧಿಕಾರಕ್ಕೆ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

ಅಲ್ಲದೇ, ಜಮೀನಿನ ಮಾಲೀಕರು ಕೊಳವೆ ಬಾವಿ ರಿಪೇರಿ ಮಾಡಲು ಪಂಪ್‌ ಅನ್ನು ಹೊರ ತಗೆದಾಗ ಕೊಳವೆಬಾವಿಗೆ ಕ್ಯಾಪ್‌ ಹಾಕಿ ಮುಚ್ಚಬೇಕು. ಕೊಳವೆ ಬಾವಿಯನ್ನು ಪುನಃಶ್ಚೇತನ ಮಾಡಲು ಇಚ್ಚಿಸಿದಲ್ಲಿ ಜಮೀನು ಮಾಲೀಕರು ಕೊಳವೆ ಬಾವಿಗೆ ಮುಚ್ಚಳದಿಂದ ಮುಚ್ಚಿ ಸುರಕ್ಷತೆಯನ್ನು ಕಾಪಾಡಬೇಕು.

ಕೊಳವೆ ಬಾವಿ ಕೊರೆಯುವಾಗ ಸೈನ್‌ ಬೋರ್ಡ್‌ ಕಡ್ಡಾಯ

ಇನ್ನೂ ಕೊಳವೆ ಬಾವಿಯನ್ನು ಕೊರೆಯುವಾಗ ಎಲ್ಲರಿಗೂ ಕಾಣುವ ರೀತಿಯಲ್ಲಿ ಕೊಳವೆ ಬಾವಿ ಕೊರೆಯುತ್ತಿರುವ ಬಗ್ಗೆ ಎಚ್ಚರಿಕೆಯ ಬೋರ್ಡ್‌ ಅನ್ನು ಪ್ರದರ್ಶಿಸಬೇಕು. ಯಾವುದೇ ಅವಘಡಗಳು ಆಗದಂತೆ ಎಚ್ಚರವಹಿಸುವುದು ಕಡ್ಡಾಯವಾಗಿದೆ ಇದಕ್ಕಾಗಿ ಸುತ್ತಲೂ ಫೆನ್ಸಿಂಗ್‌ ನಿರ್ಮಿಸಿಕೊಳ್ಳಬೇಕು.

ಸ್ಥಳೀಯ ಪ್ರಾಧಿಕಾರ / ಅಧಿಕಾರಿಗಳ ಜವಾಬ್ದಾರಿ

ಸ್ಥಳೀಯ ಪ್ರಾಧಿಕಾರ ಅಥವಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಯುವ ಸಂಧರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆಯ ಅಂಶಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಕೊರೆಸಲಾಗುತ್ತಿರುವ ಕೊಳವೆ ಬಾವಿಗಳ ಬಗ್ಗೆ ಅಂತರ್ಜಲ ಅಭಿವೃದ್ದಿ ಇಲಾಖೆಗೆ ಮಾಹಿತಿಯನ್ನು ಸಲ್ಲಿಸಬೇಕು. ಇಂಪ್ಲಿಮೆಂಟಿಂಗ್‌ ಏಜೆನ್ಸಿಯವರು ಸಹ ಕೊಳವೆ ಬಾವಿಯನ್ನು ಮುಚ್ಚುವ ಬಗ್ಗೆ ನಿಗಾವಹಿಸುವಬೇಕು. ಅಲ್ಲದೇ ಪಿಡಿಓ ಗಳು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೊಳವೆ ಬಾವಿ ಮುಚ್ಚುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಬೋರ್ಡ್‌ ಹಾಕುವುದನ್ನು ಕಡ್ಡಾಯಗೊಳಿಸಲಾಗಿವೆ ಎಂದು ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಜೈಲು ಶಿಕ್ಷೆ ಹಾಗೂ ದಂಡ

ಇಂಪ್ಲಿಮೆಂಟಿಂಗ್‌ ಏಜೆನ್ಸಿ ಹಾಗೂ ಡ್ರಿಲ್ಲಿಂಗ್‌ ಏಜೆನ್ಸಿಗಳು ಮಸೂದೆಯ 11 ಏ ಸೆಕ್ಷನ್‌ನಲ್ಲಿರುವ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಹತ್ತು ಸಾವಿರ ಜುಲ್ಮಾನೆ ಹಾಗೂ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸೆಕ್ಷನ್‌ 21 ಏ ನಿಯಮಗಳನ್ನು ಯನ್ನು ಉಲ್ಲಂಘಿಸುವ ಇಂಪ್ಲಿಮೆಂಟಿಂಗ್‌ ಏಜೆನ್ಸಿ/ ಡ್ರಿಲ್ಲಿಂಗ್‌ ಏಜೆನ್ಸಿಗಳು / ಸರ್ವಿಸಿಂಗ್‌ ಏಜೆನ್ಸಿಗಳಿಗೆ 25 ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸುವ ಅವಕಾಶವನ್ನು ಈ ಮಸೂದೆಯಲ್ಲಿ ಅಳವಡಿಸಲಾಗಿದೆ. ಅಲ್ಲದೇ, ತಮ್ಮ ಜವಾಬ್ದಾರಿ/ಕರ್ತವ್ಯಗಳನ್ನು ನಿಭಾಯಿಸುವಲ್ಲಿ ವಿಫಲವಾಗುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲು ಮಸೂದೆಯಲ್ಲಿ ನಿಯಮಗಳನ್ನು ಅಳವಡಿಸಲಾಗಿದೆ

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಭಾರತ- ಆಸ್ಟ್ರೇಲಿಯಾ 3ನೇ ಟೆಸ್ಟ್ ಡ್ರಾ: ಭಾರತ ಫೈನಲ್ ಕನಸ್ಸು ಭಗ್ನ? ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ! ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸ್ಪಿನ್ ದಂತಕತೆ ಆರ್.ಅಶ್ವಿನ್ ನಿವೃತ್ತಿ ಘೋಷಣೆ! ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ ಲಾಭಾಂಶ 108 ಕೋಟಿ ರೂ. ಸರ್ಕಾರಕ್ಕೆ ಹಸ್ತಾಂತರ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದ ಟಿಬಿ ಜಯಚಂದ್ರ! ಒಂದು ದೇಶ, ಒಂದು ಚುನಾವಣೆ: 31 ಸದಸ್ಯರ ಸಂಸದೀಯ ಸಮಿತಿಗೆ 90 ದಿನದ ಗಡುವು! ಐಸಿಯುನಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿಗೆ ಚಿಕಿತ್ಸೆ! ಜಾತಿ ಮೀಸಲಾತಿ ತೆಗೆದು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಜಯೇಂದ್ರ, ನಿರ್ಮಲಾ ಸೀತಾರಾಮ್ ಗೆ ಬಿಗ್ ರಿಲೀಫ್: ಚುನವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ ಹೈಕೋರ್ಟ್ ರದ್ದು ಬೆಂಗಳೂರಿಗೆ ಫುಡ್ ಪ್ಯಾಕೆಟಲ್ಲಿ ಬರುತ್ತೆ ಡ್ರಗ್ಸ್: ಅಂಗಡಿಯಲ್ಲಿ 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!