Sunday, June 16, 2024
Google search engine
Homeಜಿಲ್ಲಾ ಸುದ್ದಿ3 ವಾಹನಗಳ ಸರಣಿ ಅಪಘಾತ: ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ನಾಲ್ವರ ದುರ್ಮರಣ

3 ವಾಹನಗಳ ಸರಣಿ ಅಪಘಾತ: ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ನಾಲ್ವರ ದುರ್ಮರಣ

ಧರ್ಮಸ್ಥಳಕ್ಕೆ ಭೇಟಿ ನೀಡಿ ಊರಿಗೆ ಮರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಚಿಕ್ಕಮಗಳೂರಿನ ಮೂಡಿಗೆರೆಯ ಬಣಕಲ್-ಕೊಟ್ಟಿಗೆಹಾರ ಬಳಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.

ಮೆಸ್ಕಾಂ ಲಾರಿ, ಓಮಿನಿ ಹಾಗೂ ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಚಿತ್ರದುರ್ಗದ ನಿವಾಸಿಗಳಾದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಓಮಿನಿ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಮೆಸ್ಕಾಂ ಲಾರಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಓಮಿನಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಮರಳುತ್ತಿದ್ದಾಗ ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ ಈ ದುರಂತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಓಮಿನಿ ಕಾರು ನಜ್ಜುಗುಜ್ಜಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments