Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಜಿಲ್ಲಾ ಸುದ್ದಿ

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ 3 ಯುವತಿಯರ ಸಾವು, ಇಬ್ಬರ ಬಂಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
swminng pool
swminng pool

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ ನಲ್ಲಿ ನಡೆದಿದೆ.

ಮೈಸೂರಿನ ಇಂಜಿನಿಯರ್ ವಿದ್ಯಾರ್ಥಿಗಳಾದ ನಿಶಿತಾ ಎಂಡಿ (21), ಪಾರ್ವತಿ ಎಸ್ (20) ಹಾಗೂ ಕೀರ್ತನಾ ಎನ್ (21) ಮೃತ ಯುವತಿಯರು. ಪ್ರಕರಣದ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಬೆಳಗ್ಗೆ ಬೀಚ್ ರೆಸಾರ್ಟ್‌ ಗೆ ಆಗಮಿಸಿದ್ದ ಮೂವರು ಯುವತಿಯರು ಕೊಠಡಿ ಪಡೆದಿದ್ದರು. ಭಾನುವಾರ ಬೆಳಗ್ಗೆ 8:30ರ ಸುಮಾರಿಗೆ ಈಜುಕೊಳಕ್ಕೆ ಇಳಿದಿದ್ದ ಯುವತಿಯರು ಆಟವಾಡುತ್ತಿದ್ದ ವೇಳೆ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ವಿಮ್ಮಿಂಗ್ ಪೂಲ್‌ನಲ್ಲಿ ಒಂದು ಬದಿ 6 ಅಡಿಯಷ್ಟು ಆಳವಿತ್ತು. ಈ ವೇಳೆ ಆಯತಪ್ಪಿ ಓರ್ವ ಯುವತಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ರೆಸಾರ್ಟ್ ನ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಈಜುವ ದೃಶ್ಯವನ್ನು ಐಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ.  ಈಜು ಕೊಳ ಸಂಪೂರ್ಣ ಕವರ್‌ ಆಗುವಂತೆ ಸ್ವಲ್ಪ ದೂರದಲ್ಲಿ ಐಫೋನ್‌ ಇರಿಸಿದ್ದರು. ಈಜು ಬಾರದ ಮೂವರು ಆರಂಭದಲ್ಲಿ ಕೊಳದಲ್ಲಿ ಆಡುತ್ತಿದ್ದರು. ಓರ್ವ ಯುವತಿ 6 ಅಡಿ ಆಳದ ಜಾಗಕ್ಕೆ ಹೋಗಿದ್ದು ಮುಳುಗಲು ಆರಂಭಿಸಿದ್ದಾಳೆ. ಆಕೆ ಒಬ್ಬರ ನಂತರ ಒಬ್ಬರಂತೆ ಇಬ್ಬರು ಹೋಗಿದ್ದು ಮೂವರು ಮುಳುಗಿದ್ದಾರೆ.

ನಿಯಮದ ಪ್ರಕಾರ ರೆಸಾರ್ಟ್ ಗಳಲ್ಲಿ 4 ಅಡಿಗಿಂತ ಹೆಚ್ಚು ಆಳದ ಈಜುಕೊಳ ನಿರ್ಮಿಸುವಂತಿಲ್ಲ. ಅಲ್ಲದೇ ಆಳದ ಈಜುಕೊಳ ನಿರ್ಮಿಸಿದ್ದರೆ ಕನಿಷ್ಠ ಒಬ್ಬ ಸಿಬ್ಬಂದಿ ಈಜುಕೊಳದ ಬಳಿ ರಕ್ಷಣೆಗೆ ನಿಲ್ಲಿಸಬೇಕಿತ್ತು. ಆದರೆ ರೆಸಾರ್ಟ್ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದರಿಂದ ಈ ದುರಂತ ಸಂಭವಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment