Kannadavahini

ಬಾರಿಸು ಕನ್ನಡ ಡಿಂಡಿಮವ

ತಾಜಾ ಸುದ್ದಿ ದೇಶ

ತಮಿಳುನಾಡಿನಲ್ಲಿ ಅಕ್ರಮ ಮದ್ಯ ಸೇವಿಸಿ 34 ಮಂದಿ ದುರ್ಮರಣ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!

ಅಕ್ರಮ ಮದ್ಯ ಸೇವಿಸಿ 34 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ಸಂಭವಿಸಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಪರಿಸ್ಥಿತಿ ಚಿಂತಾಜನಕವಾಗಿರುವ ಅಸ್ವಸ್ಥರನ್ನು ಸೇಲಂ, ತಿರುಮಣ್ಣಮಲೈ ಮತ್ತು ಪುರುಷೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣದ ಸಂಬಂಧ ನಾಲ್ವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್ ಘಟನೆಗೆ ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದು, ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

LEAVE A RESPONSE

Your email address will not be published. Required fields are marked *