ಪ್ರಯಾಣಿಕರ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡ್ ನ ಅಲ್ಮೋರಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಬೆಳಿಗ್ಗೆ 9 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಬಸ್ ನಲ್ಲಿದ್ದ ಚಾಲಕ ಸೇರಿದಂತೆ ಎಲ್ಲಾ 36 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೌರಿ ಜಿಲ್ಲೆಯಿಂದ ನೈನಿತಾಲ್ ನ ರಾಮ್ ನಗರಕ್ಕೆ ಬಸ್ ಹೊರಟ್ಟಿದ್ದು, ಬಸ್ ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಪ್ರಯಾಣಿಕರು ಇದ್ದಿದ್ದೇ ದುರಂತಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.