Sunday, June 16, 2024
Google search engine
Homeಜಿಲ್ಲಾ ಸುದ್ದಿಸವದತ್ತಿಯಲ್ಲಿ ಪ್ರಸಾದ ಸೇವಿಸಿ 43 ಮಂದಿ ಅಸ್ವಸ್ಥ: ಐವರ ಸ್ಥಿತಿ ಗಂಭೀರ

ಸವದತ್ತಿಯಲ್ಲಿ ಪ್ರಸಾದ ಸೇವಿಸಿ 43 ಮಂದಿ ಅಸ್ವಸ್ಥ: ಐವರ ಸ್ಥಿತಿ ಗಂಭೀರ

ಜಾತ್ರೆಯ ವೇಳೆ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾಡಿದ್ದ ಮಾವಿನ ಹಣ್ಣಿನ ಶಿಖರಣಿ ಸೇವಿಸಿ ಈ ದುರ್ಘಟನೆ ಸಂಭವಿಸಿದೆ.

ಪ್ರಸಾದ ಸೇವಿಸಿದವರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಆರಂಭವಾಗಿದೆ. ಕೂಡಲೇ ಅಸ್ವಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ತೀವ್ರ ಅಸ್ವಸ್ಥಗೊಂಡ ಐವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ.

ಅಹಿತಕರ ಘಟನೆ ಆಗದಂತೆ ತಾಲೂಕಾಧಿಕಾರಿಗಳು ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಈವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪಬ್ಲಿಕ್ ಟಿವಿಗೆ ಡಿಎಚ್‍ಓ ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments