Monday, July 22, 2024
Google search engine
Homeಜಿಲ್ಲಾ ಸುದ್ದಿಕಡಲ್ಕೊರೆತ ತಡೆಗೆ ಕರಾವಳಿಯ 3 ಜಿಲ್ಲೆಗಳಿಗೆ ತಲಾ 5 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಡಲ್ಕೊರೆತ ತಡೆಗೆ ಕರಾವಳಿಯ 3 ಜಿಲ್ಲೆಗಳಿಗೆ ತಲಾ 5 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಡಲ ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡಲ ಕೊರೆತದ ಶಾಶ್ವತ ಪರಿಹಾರಕ್ಕಾಗಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಮಾತ್ರ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇದೇ ವೇಳೆ ನಟ ದರ್ಶನ್ ಬಂಧನ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಅವರು ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನಿನ ಎಲ್ಲರೂ ಒಂದೇ. ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments