82
ಭಾರತದ ಇತಿಹಾಸದಲ್ಲೇ ಅತೀ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಅನ್ನು ಅಂಡಮಾನ್ ನಲ್ಲಿ ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದೆ.
ಅಂಡಮಾನ್ ಬಳಿ ಸಮುದ್ರ ಮಾರ್ಗವಾಗಿ ಸಾಗಿಸಲಾಗುತ್ತಿದ್ದ 5 ಟನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯಮಾಪನ ನಡೆಯುತ್ತಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೀನುಗಾರಿಕಾ ದೋಣಿ ಮೂಲಕ ಡ್ರಗ್ಸ್ ಇದಾಗಿದ್ದು, ಕಂಟೇನರ್ ನಲ್ಲಿ ಅಡಗಿಸಿ ಸಮುದ್ರ ಮಾರ್ಗವಾಗಿ ಸಾಗಿಸಲು ಯತ್ನಿಸುತ್ತಿದ್ದಾಗ ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.