Thursday, November 14, 2024
Google search engine
Homeತಾಜಾ ಸುದ್ದಿಸಿಬಿಐ ನಿರಾಕರಿಸಿದ ಅಕ್ರಮ ಗಣಿಗಾರಿಕೆಯ 6 ಪ್ರಕರಣ ಎಸ್ ಐಟಿ ವಹಿಸಲು ರಾಜ್ಯ ಸರ್ಕಾರ ಚಿಂತನೆ!

ಸಿಬಿಐ ನಿರಾಕರಿಸಿದ ಅಕ್ರಮ ಗಣಿಗಾರಿಕೆಯ 6 ಪ್ರಕರಣ ಎಸ್ ಐಟಿ ವಹಿಸಲು ರಾಜ್ಯ ಸರ್ಕಾರ ಚಿಂತನೆ!

ಬೆಂಗಳೂರು: ಸಿಬಿಐ ತನಿಖೆಗೆ ವಹಿಸಿದ 9 ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ವಾಪಸ್ ಕಳುಹಿಸಿದ್ದ 6 ಪ್ರಕರಣಗಳನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಈ ವಿಷಯ ತಿಳಿಸಿದರು.

ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದು ಗೋವಾದ ಮರ್ಮಗೋವಾ ಮತ್ತು ಪಣಜಿ, ತಮಿಳುನಾಡಿನ ಎನ್ನೋರ್ ಮತ್ತು ಚೆನ್ನೈ, ಕರ್ನಾಟಕದ ನವ ಮಂಗಳೂರು ಮತ್ತು ಕಾರವಾರ ಬಂದರುಗಳಲ್ಲಿ ಹಾಗೂ ಆಂಧ್ರ ಪ್ರದೇಶದ ಕೃಷ್ಣ ಪಟ್ಟಣಂ, ಕಾಕಿನಾಡ ಮತ್ತು ವಿಶಾಖಪಟ್ಟಣಂ ಬಂದರುಗಳಲ್ಲಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣಗಳನ್ನು ಸಿಬಿಐ ವಾಪಸ್ಸು ಕಳುಹಿಸಿತ್ತು. ಈ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ನಿರ್ಣಯಿಸಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ವಿವರಿಸಿದರು.

ಅಕ್ರಮ ಗಣಿಗಾರಿಕೆ ಎಲ್ಲಾ ಪ್ರಕರಣಗಳನ್ನು ಸೂಕ್ತವಾದ ತನಿಖೆಗೆ ಒಳಪಡಿಸುವುದು ಅಗತ್ಯವಾಗಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟ ಸಭೆಗೆ ಈ ಪ್ರಕರಣಗಳ ತನಿಖೆ ಕುರಿತ ವಿವರಗಳನ್ನು ಮಂಡಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದರು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿರ್ಣಯಿಸಲಾಗುವುದು ಎಂದು ಸಚಿವರು ವಿವರಿಸಿದರು.

ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಅಕ್ರಮ ಗಣಿಗಾರಿಕೆ ಕಷ್ಟವುಂಟು ಮಾಡಿದ ʼಸಿʼ ವರ್ಗದ 10 ಗಣಿ ಗುತ್ತಿಗೆದಾರರ ಪ್ರಕರಣಗಳನ್ನು ಸಹ ಈಗಿನ ಎಸ್.ಐ.ಟಿ ತನಿಖೆಗೆ ವಹಿಸಲು ನಿರ್ಣಯಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಮೆ.ಮೈಸೂರು ಮ್ಯಾಂಗನೀಸ್ ಕಂಪನಿ, ಮೆ. ಎಂ.ದಶರಥ ರಾಮಿ ರೆಡ್ಡಿ, ಮೆ. ಅಲ್ಲಂ ವೀರಭದ್ರಪ್ಪ, ಮೆ. ಕರ್ನಾಟಕ ಲಿಂಪೊ, ಮೆ. ಅಂಜನಾ ಮಿನರಲ್ಸ್, ಮೆ. ರಾಜೀಯ ಖಾನುಂ, ಮೆ. ಮಿಲನ ಮಿನರಲ್ಸ್ (ಮಹಾಲಕ್ಷಿ & ಕಂ), ಮೆ. ಎಂ.ಶ್ರೀನಿವಾಸುಲು, ಮೆ. ಚನ್ನಕೇಶವ ರೆಡ್ಡಿ (ಲಕ್ಷ್ಮೀನರಸಿಂಹ ಮೈನಿಂಗ್ ಕಂಪನಿ ಮತ್ತು ಮೆ. ಜಿ.ರಾಯಶೇಖರ್ ಕಂಪನಿಗಳು ಅಕ್ರಮ ಗಣಿಗಾರಿಕೆಗಳು ಮಂಜೂರಾದ ಗುತ್ತಿಗೆ ಪ್ರದೇಶದ ಹೊರಗೆ ಶೇ.10 ಕ್ಕಿಂತ ಹೆಚ್ಚು ಗಣಿಗಾರಿಕೆ ಹೊಂಡಗಳು ಮತ್ತು ಮಂಜೂರಾದ ಗುತ್ತಿಗೆಗಿಂತ ಹೆಚ್ಚು ಎಂದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಮತ್ತು ಅರಣ್ಯ ಸಂರಕ್ಷಣೆ ಕಾಯ್ದೆಯ ಉಲ್ಲಂಘನೆಯಲ್ಲಿ ತೊಡಗಿರುವ ಗುತ್ತಿಗೆಗಳು ಮತ್ತು ಇತರೆ ಗುತ್ತಿಗೆ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವುದನ್ನು ಒಳಗೊಂಡಿರುತ್ತದೆ. ಆದ್ದರಿಂದ ಈ ಮೇಲ್ಕಂಡ ಕಂಪನಿಗಳ ಗಣಿ ಗುತ್ತಿಗೆಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವ ಸಂಬಂಧ ಮಾನ್ಯ ಲೋಕಾಯುಕ್ತದ ವಿಶೇಷ ತನಿಖಾ ದಳಕ್ಕೆ ವಹಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಚಿವರು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments