Saturday, July 27, 2024
Google search engine
Homeಜಿಲ್ಲಾ ಸುದ್ದಿಡಿವೈಡರ್ ಗೆ ಡಿಕ್ಕಿ ಹೊಡೆದು ಟ್ರಕ್ ಗೆ ಡಿಕ್ಕಿಯಾದ ಕಾರು: ಮಗು ಸೇರಿ 6 ಮಂದಿ...

ಡಿವೈಡರ್ ಗೆ ಡಿಕ್ಕಿ ಹೊಡೆದು ಟ್ರಕ್ ಗೆ ಡಿಕ್ಕಿಯಾದ ಕಾರು: ಮಗು ಸೇರಿ 6 ಮಂದಿ ದುರ್ಮರಣ

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಟ್ರಿಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದಲ್ಲಿ ಸಂಭವಿಸಿದೆ.

ಹಾಸನದ ಹೊರವಲಯದ ಈಚನಹಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಹೊಸಕೋಟೆ ನಿವಾಸಿಗಳಾದ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ ರಾಕೇಶ್ ಮೃತಪಟ್ಟ ದುರ್ದೈವಿಗಳು.

ಮೃತರು ಹೊಸಕೋಟೆ ತಾಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎಂದು ತಿಳಿದು ಬಂದಿದೆ.

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಹಾರಿ ಕಂಟೇನರ್‌ಗೆ ಗುದ್ದಿದ ಪರಿಣಾಮ ಘಟನೆ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಒಂದು ಮಗು, ಇಬ್ಬರು ಮಹಿಳೆಯರು, ಮೂರು ಪುರುಷರು ಮೃತಪಟ್ಟಿದ್ದು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ಸಮೇತರಾಗಿ ತೆರಳಿದ್ದರು. ಅಲ್ಲಿಂದ ವಾಪಸ್ ಊರಿಗೆ ಮರಳುವಾಗ ನಿದ್ರೆ ಮಂಪರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಿಕ್ಕಬಳ್ಳಾಪುರ ಆರ್‌ಟಿಒ ವ್ಯಾಪ್ತಿಯದ್ದಾಗಿದ್ದು, ಮಾಲೀಕ ಮನೋಜ್ ಕುಮಾರ್ ಹೆಸರಿನಲ್ಲಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments