29
ಇಂಗ್ಲೆಂಡ್ ತಂಡದ ಮಧ್ಯಮ ವೇಗಿ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಧರ್ಮಶಾಲಾದಲ್ಲಿ ನಡೆದ ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಂಡರ್ಸನ್, ಕುಲದೀಪ್ ಯಾದವ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು.
41 ವರ್ಷದ ಆಂಡರ್ಸನ್ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಶ್ರೀಲಂಕಾದ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ (800) ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ (708) ಮೊದಲೆರಡು ಸ್ಥಾನದಲ್ಲಿದ್ದಾರೆ.