Home ತಾಜಾ ಸುದ್ದಿ 72 ಸಂಸದರು ಸಚಿವರಾಗಿ ಪ್ರಮಾಣ ವಚನ: 11 ಮೈತ್ರಿ ಪಕ್ಷಗಳಿಗೆ ಸ್ಥಾನ, 30 ಮಂದಿಗೆ ಸಂಪುಟ ದರ್ಜೆ ಸ್ಥಾನ!

72 ಸಂಸದರು ಸಚಿವರಾಗಿ ಪ್ರಮಾಣ ವಚನ: 11 ಮೈತ್ರಿ ಪಕ್ಷಗಳಿಗೆ ಸ್ಥಾನ, 30 ಮಂದಿಗೆ ಸಂಪುಟ ದರ್ಜೆ ಸ್ಥಾನ!

by Editor
0 comments

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಬಾರಿಯ ಆಡಳಿತದಲ್ಲಿ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾತ್ರಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾ ಮೂರನೇ ಬಾರಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದರೆ, ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರತಿಜ್ಞಾ ವಿಧಿ ಬೋದಿಸಿದರು.

ಪ್ರಧಾನಿ ಮೋದಿ ಜೊತೆಯಲ್ಲೇ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ 24 ರಾಜ್ಯಗಳಿಗೆ ಮಣೆ ಹಾಕಲಾಗಿದ್ದು, ಎನ್ ಡಿಎ ಮೈತ್ರಿ ಪಕ್ಷದ 11 ಸಂಸದರಿಗೆ ಮೋದಿ ಸಂಪುಟದಲ್ಲಿ ಸ್ಥಾನ ದೊರೆತಿದೆ.

72 ಸಚಿವರ ಪೈಕಿ 30 ಮಂದಿ ಸಂಪುಟ ದರ್ಜೆ ಹಾಗೂ 5 ಸಂಸದರಿಗೆ ಸ್ವತಂತ್ರ ಖಾತೆ ಹಾಗೂ 36 ಸಂಸದರು ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

banner

10 ವರ್ಷಗಳ ಕಾಲ ಯುಪಿಎ ನಂತರ ಅತ್ಯಂತ ಯಶಸ್ವಿ ಮೋದಿ ಸರ್ಕಾರ ಆಡಳಿತ ನೀಡಿದ್ದು, ಇದೀಗ ನೆಹರು ನಂತರ ಸತತ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲಿಗ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ಗರಿಷ್ಠ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುವ ಕಾರಣ ಭಾನುವಾರ ಸಂಜೆ 730ರ ಸುಮಾರಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್ ಬಿಜೆಪಿಗೆ ಮಹಾರಾಷ್ಟ್ರ ಸಿಎಂ ಪಟ್ಟ, 2 ಪಕ್ಷಗಳಿಗ ಡಿಸಿಎಂ ಸ್ಥಾನ? World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ! ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ? Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ