Thursday, October 24, 2024
Google search engine
Homeತಾಜಾ ಸುದ್ದಿಬೆಂಗಳೂರು: ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಗುಂಡಿಗೆ ಬಿದ್ದು ಸಾವು

ಬೆಂಗಳೂರು: ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಗುಂಡಿಗೆ ಬಿದ್ದು ಸಾವು

ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಹಾಕಲು ತೊಡಿದ್ದ ನೀರು ತುಂಬಿದ ಗುಂಡಿಗೆ ಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ಸುಹಾಸ್ ಗೌಡ (5) ಮೃತಪಟ್ಟಿದ್ದಾನೆ. ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಯ ವೇಳೆಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಇಲ್ಲಿ ಲಿಫ್ಟ್ ಗೆಂದು 5 ಅಡಿ ಗುಂಡಿ ತೋಡಲಾಗಿತ್ತು. ಭಾರೀ ಮಳೆಯ ಪರಿಣಾಮ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ ಸಿಬ್ಬಂದಿ ಯಾವುದೇ ಮುನ್ನೆಚ್ಚರಿಕೆ ವಹಿಸಿರಲಿಲ್ಲ.

ಸುಹಾಸ್ ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಪ್ರಕರಣದ ಕುರಿತು ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ ಎಫ್‌ಐಆರ್ ದಾಖಲಾಗಿದೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments