Friday, September 20, 2024
Google search engine
Homeತಾಜಾ ಸುದ್ದಿಗಂಗಾ ಆರತಿ ಅಧ್ಯಯನಕ್ಕೆ ಇಂದಿನಿಂದ 2 ದಿನ ಹರಿದ್ವಾರ, ವಾರಣಾಸಿ ಪ್ರವಾಸ ಕೈಗೊಳ್ಳಲಿರುವ ಸಚಿವರು, ಶಾಸಕರ...

ಗಂಗಾ ಆರತಿ ಅಧ್ಯಯನಕ್ಕೆ ಇಂದಿನಿಂದ 2 ದಿನ ಹರಿದ್ವಾರ, ವಾರಣಾಸಿ ಪ್ರವಾಸ ಕೈಗೊಳ್ಳಲಿರುವ ಸಚಿವರು, ಶಾಸಕರ ನಿಯೋಗ!

ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಲಿದೆ.

ಕೃಷಿ ಸಚಿವ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ನಿಯೋಗ ಹರಿದ್ವಾರ ಮತ್ತು ವಾರಣಾಸಿಗೆ ಸೆ.20 ಹಾಗೂ ಸೆ.21ರಂದು 2 ದಿನಗಳ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಲಿ ಎಂಬ ಆಶಯಕ್ಕಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮಬಾರಿಗೆ ಕಾವೇರಿ ನದಿಗೆ ಗಂಗಾ ಆರತಿ ಮಾದರಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸುವುದಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಘೋಷಣೆ ಮಾಡಿದ್ದರು.

ಹರಿದ್ವಾರ ಮತ್ತು ಮತ್ತು ವಾರಣಾಸಿಯಲ್ಲಿ ಗಂಗಾ ನದಿಗೆ ಆರತಿ ಮಾಡುವುದನ್ನು ವೀಕ್ಷಿಸಿ ಸಮಗ್ರವಾಗಿ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲು ಸಚಿವ ಚಲುವರಾಯಸ್ವಾಮಿ ಅವರ ಆಧ್ಯಕ್ಷತೆಯಲ್ಲಿ ಶಾಸಕರು, ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿತ್ತು. ಇದೀಗ ಸಮಿತಿ ಸದಸ್ಯರು ಅಧ್ಯಯನ ಪ್ರವಾಸಕ್ಕೆ ತೆರಳಿದ್ದಾರೆ.

2 ದಿನಗಳ ಪ್ರವಾಸ

ಕೃಷಿ ಸಚಿವರ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಮಾಗಡಿ ಬಾಲಕೃಷ್ಣ , ಮೈಸೂರು ಹರೀಶ್ ಗೌಡ, ನಂಜನಗೂಡು ದರ್ಶನ್ ಧೃವನಾರಾಯಣ್,ಅರಸೀಕೆರೆ ಶಿವಲಿಂಗೇಗೌಡ,  ಕೊಳ್ಳೇಗಾಲ ಕೃಷ್ಣಮೂರ್ತಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಅಪ್ಪಾಜಿಗೌಡ,  ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮಾಜಿ ಶಾಸಕ ರಾಜು ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಜಲಸಂಪನ್ಮೂಲ ಸಚಿವರ ಸಲಹೆಗಾರ ಜಯಪ್ರಕಾಶ್ ಅವರನ್ನೊಳಗೊಂಡ ನಿಯೋಗ ಪ್ರವಾಸ ಕೈಗೊಂಡಿದೆ.

ನಿಯೋಗವು ಸೆ.20ರ ಶುಕ್ರವಾರ ರಾತ್ರಿ ಹರಿದ್ವಾರದಲ್ಲಿ ಗಂಗಾ ನದಿಗೆ ಆರತಿ ಮಾಡುವುದನ್ನು ವೀಕ್ಷಣೆ ಮಾಡಲಿದೆ. ಸೆ.21ರ ಶನಿವಾರದಂದು ವಾರಣಾಸಿಗೆ ತೆರಳಿ ಗಂಗಾ ಆರತಿಗೆ ಅತ್ಯಂತ ಪ್ರಸಿದ್ಧ ಹಾಗೂ ಪವಿತ್ರ ಘಾಟ್ ಆದ ದಶಾಸ್ವಮೇಧ ಘಾಟ್ ನಲ್ಲಿ ಗಂಗಾ ಆರತಿಯನ್ನು ವೀಕ್ಷಣೆ ಮಾಡಲಿದೆ. ಸೆ. 22ರ ಭಾನುವಾರ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವುದರ ಜೊತೆಗೆ ಘಾಟ್ ನಲ್ಲಿ ಸಂಚರಿಸಿ, ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ  ರಾಜ್ಯಕ್ಕೆ ವಾಪಸಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments