Friday, September 20, 2024
Google search engine
Homeತಾಜಾ ಸುದ್ದಿಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಮರ್ಮಾಂಗ ಕತ್ತರಿಸಿದ ನರ್ಸ್!

ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಮರ್ಮಾಂಗ ಕತ್ತರಿಸಿದ ನರ್ಸ್!

ಕೋಲ್ಕತಾದ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆದ ಪ್ರಕರಣ ಒಂದು ತಿಂಗಳು ಕಳೆದಿಲ್ಲ. ಆಗಲೇ ಬಿಹಾರದಲ್ಲೇ ಅಂತಹದ್ದೇ ಪೈಶಾಕಿಕ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ವೈದ್ಯ ಸೇರಿದಂತೆ ಹಲರಿಂದ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.  ವಿಶೇಷ ಅಂದರೆ ಅತ್ಯಾಚಾರಕ್ಕೆ ಯತ್ನಿಸಿದವರಲ್ಲಿ ಒಬ್ಬನ ಮರ್ಮಾಂಗವನ್ನು ಬ್ಲೇಡ್ ನಿಂದ ಕತ್ತರಿಸಿ ನರ್ಸ್ ಪಾರಾಗಿದ್ದಾರೆ.

ಸಮಸ್ತಿಪುರ್ ಜಿಲ್ಲೆಯ ಗಂಗಾಪುರದಲ್ಲಿರುವ ಮುರ್ಸಿಘರಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆರ್ ಬಿಎಸ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವ್ಯವಸ್ಥಾಪಕ ವೈದ್ಯ ಡಾ.ಸಂಜಯ್ ಕುಮಾರ್ ಮತ್ತು ಆತನ ಇಬ್ಬರು ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯ ಸಂಜಯ್ ಕುಮಾರ್ ಕುಮಾರ್ ಅವರ ಮರ್ಮಾಂಗವನ್ನು ಬ್ಲೇಡ್ ನಿಂದ ಕತ್ತರಿಸಿ ನರ್ಸ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ತಪ್ಪಿಸಿಕೊಂಡು ಆಸ್ಪತ್ರೆಯಿಂದ ಹೊರಗೆ ಬಂದ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ನರ್ಸ್ ಸುರಕ್ಷತೆ ಬಗ್ಗೆ ಗಮನ ಹರಿಸಿದ್ದು, ವೈದ್ಯ ಸಂಜಯ್, ಸ್ನೇಹಿತರಾದ ಸುನೀಲ್ ಕುಮಾರ್ ಗುಪ್ತ ಮತ್ತು ಅವದೇಶ್ ಕುಮಾರ್ ನನ್ನು ಬಂಧಿಸಿದ್ದಾರೆ.

ಪೊಲೀಸರು ಆಸ್ಪತ್ರೆಯಲ್ಲಿರುವ ಸಿಸಿಟಿವಿ, ಮದ್ಯದ ಬಾಟಲಿ ಹಾಗೂ ಮರ್ಮಾಂಗ ಕತ್ತರಿಸಿದ ಬ್ಲೇಡ್ ವಶಕ್ಕೆ ಪಡೆದಿದ್ದು,  ಮೂವರು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡ ನರ್ಸ್ ಧೈರ್ಯ ಹಾಗೂ ಸಾಹಸಕ್ಕೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸುವ ಮುನ್ನ ಆರೋಪಿಗಳು ಮದ್ಯ ಸೇವಿಸಿದ್ದರು. ಆಸ್ಪತ್ರೆಯಲ್ಲೇ ಮದ್ಯ ಸೇವಿಸಿ ದುಷ್ಕೃತ್ಯಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments