ಬಾಲಿವುಡ್ ನಟ ಸಲ್ಮಾನ್ ಖಾನ್ ಬೆದರಿಕೆ ಹಾಕಿದ್ದ 35 ವರ್ಷದ ಆರೋಪಿಯನ್ನು ತುಮಕೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸಲ್ಮಾನ್ ಖಾನ್ ಗೆ ಸೋಮವಾರ ಮೂರನೇ ಬಾರಿ ಬೆದರಿಕೆ ಕರೆ ಬಂದಿದ್ದು, ದೇವಸ್ಥಾನದಲ್ಲಿ ತಪ್ಪು ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ 5 ಕೋಟಿ ರೂ. ಕೊಡಬೇಕು ಎಂದು ಆರೋಪಿ ಬೆದರಿಕೆ ಹಾಕಿದ್ದ.
ಹೊಸದಾಗಿ ಬಂದ ಬೆದರಿಕೆಯ ಮೊಬೈಲ್ ನಂಬರ್ ಟ್ರೇಸ್ ಮಾಡಿದ ಮುಂಬೈ ಪೊಲೀಸರು 35 ವರ್ಷದ ವಿಕ್ರಂ ಎಂಬಾತನನ್ನು ತುಮಕೂರಿನಲ್ಲಿ ಬಂಧಿಸಿ ಮುಂಬೈಗೆ ಕರೆದೊಯ್ದಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡಬೇಕು ಮತ್ತು ಕೃಷ್ಣಮೃಗ ಬೇಟೆಯಾಡಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕು ಎಂದು ವಿಕ್ರಂ ತಮ್ಮ ಸಂದೇಶದಲ್ಲಿ ಬೆದರಿಕೆ ಹಾಕಿದ್ದ.
ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್ ಕೊಲೆ ಬೆದರಿಕೆ ಹಾಕಿದ ನಂತರ ಸಲ್ಮಾನ್ ಗೆ ಬಂದ ಮೂರನೇ ಬೆದರಿಕೆ ಕರೆಯಾಗಿದೆ. ಬೆದರಿಕೆ ಕರೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟುತ್ತಿದ್ದಾರೆ.
ತುಮಕೂರಿನಲ್ಲಿ ಬಂಧಿತ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಂಡಿದ್ದು, ಸಲ್ಮಾನ್ ಖಾನ್, ಬಿಷ್ಣೋಯ್ ಸಮುದಾಯದ ದೇವಸ್ಥಾನಕ್ಕೆ ಭೇಟಿ ನೀಡಬೇಕು ಮತ್ತು ಕೃಷ್ಣಮೃಗ ಬೇಟೆಯಾಡಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕು ಎಂದು ಬೆದರಿಕೆ ಕರೆ ಮಾಡಿದ್ದ.
ತುಮಕೂರಿನಲ್ಲಿ ವಿಕ್ರಂನನ್ನು ಬಂಧಿಸಲಾಗಿದೆ. ಆತ ಯಾರು ಎಂಬ ಬಗ್ಗೆ ಮುಂಬೈ ಪೊಲೀಸರು ವಿವರಗಳನ್ನು ಬಹಿರಂಗಪಡಿಸಿಲ್ಲ.