Home ಅಪರಾಧ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಘಾತಕಾರಿ ಘಟನೆ: ಸಿಐಎಸ್ ಎಫ್ ರೈಫಲ್ ಕಸಿಯಲು ಯತ್ನ!

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಘಾತಕಾರಿ ಘಟನೆ: ಸಿಐಎಸ್ ಎಫ್ ರೈಫಲ್ ಕಸಿಯಲು ಯತ್ನ!

by Editor
0 comments
bengaluru

ಸಿಐಎಸ್ ಎಫ್ ಯೋಧನಿಂದ ವ್ಯಕ್ತಿಯೊಬ್ಬ ರೈಫಲ್ ಕದಿಯಲು ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಅಕ್ಟೋಬರ್ 14ರಂದು ಈ ಘಟನೆ ನಡೆದಿದ್ದು, ಕಸ್ತೂರಿ ನಗರದ ನಿವಾಸಿ 35 ವರ್ಷದ ವಿಕ್ರಂ ರಾಮದಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್ ನಿಂದ ಬೆಳಿಗ್ಗೆ ಆಗಮಿಸಿದ್ದ ವಿಕ್ರಂ ರಾಮದಾಸ್ ಅಚಾತುರ್ಯದಿಂದ ಮತ್ತೊಬ್ಬರ ಲಗೇಜ್ ತೆಗೆದುಕೊಂಡಿದ್ದರು. ಇದರಿಂದ ಸಹ ಪ್ರಯಾಣಿಕರ ಜೊತೆ ಸಣ್ಣ ಘರ್ಷಣೆ ಉಂಟಾಯಿತು. ಈ ವೇಳೆ ಮಧ್ಯಪ್ರವೇಶಿಸಿದ ಭಧ್ರತೆ ನಿಯೋಜಿಸಿದ್ದ ಸಿಐಎಸ್ ಎಫ್ ಯೋಧ ಸಮಾಧಾನಪಡಿಲು ಯತ್ನಿಸಿದ.

ಈ ವೇಳೆ ಏಕಾಏಕಿ ರಾಮದಾಸ್ ಯೋಧರ ರೈಫಲ್ ಕಸಿದುಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಸಿಐಎಸ್ ಎಫ್ ಯೋಧ ಮೇಲಾಧಿಕಾರಿಗಳ ಗಮನಕ್ಕೆ ವಿಷಯ ತಂದಿದ್ದು ರಾಮದಾಸ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

banner

ರಾಮದಾಸ್ ನನ್ನು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್ ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ