Thursday, September 19, 2024
Google search engine
Homeಜಿಲ್ಲಾ ಸುದ್ದಿವಿಜಯಪುರದ ಸಿದ್ದೇಶ್ವರ ಜಾತ್ರೆ ವೇಳೆ ಅವಘಡ: ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು

ವಿಜಯಪುರದ ಸಿದ್ದೇಶ್ವರ ಜಾತ್ರೆ ವೇಳೆ ಅವಘಡ: ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು

ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಸಂಭವಿಸಿದೆ.

ಶನಿವಾರ ನಡೆದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, ದೇವೇಂದ್ರ ಬಡಿಗೇರ್ (24) ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಥವನ್ನು ಎಳೆಯುವ ವೇಳೆ ಆಯತಪ್ಪಿ ಚಕ್ರದ ಅಡಿಗೆ ದೇವೇಂದ್ರ ಬಡಿಗೇರ್ ಅವರನ್ನು ಕೂಡಲೇ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments