0
ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟದ ಪ್ರಕರಣದ ಆರೋಪಿಗಳನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ವಶಕ್ಕೆ ನೀಡಲಾಗಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಮತ್ತು ಬಾಂಬರ್ ಮುಸಾಫಿರ್ ಹುಸೇನ್ ಶಾಜಿಬ್ ಅವರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಎನ್ ಐಎ ವಶಕ್ಕೆ ನೀಡಲು ಸಮ್ಮತಿಸಿದರು. ಈ ಇಬ್ಬರು ಆರೋಪಿಗಳನ್ನು ಪಶ್ಚಿಮ ಬಂಗಾಳದ ದಿಢಾ ಗಡಿಯಲ್ಲಿ ಬಂಧಿಸಲಾಗಿತ್ತು.