Monday, July 22, 2024
Google search engine
Homeಅಪರಾಧ5 ದಿನ ಪೊಲೀಸ್ ಕಸ್ಟಡಿಗೆ ನಟ ದರ್ಶನ್, ಪವಿತ್ರಾ ಗೌಡ

5 ದಿನ ಪೊಲೀಸ್ ಕಸ್ಟಡಿಗೆ ನಟ ದರ್ಶನ್, ಪವಿತ್ರಾ ಗೌಡ

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಆರೋಪಿಗಳಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

24ನೇ ಎಸಿಎಂಎಂ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಸಿ. ಗೌಡರ್ ಸುದೀರ್ಘ ವಿಚಾರಣೆ ನಂತರ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದ್ದಾರೆ.

ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಂಗಳವಾರ ಬೆಳಿಗ್ಗೆ ಬಂಧಿಸಲಾಗಿದ್ದ ದರ್ಶನ್ ಅವರನ್ನು ಮೈಸೂರಿನಲ್ಲಿ ವಶಕ್ಕೆ ಪಡೆದ ನಂತರ ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದ ನಂತರ ಮಧ್ಯಾಹ್ನ 3 ಗಂಟೆಗೆ ಬಂಧಿಸಲಾಯಿತು. ಸಂಜೆ 6.30ರ ಸುಮಾರಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು 14 ದಿನಗಳ ವಶಕ್ಕೆ ನೀಡುವಂತೆ ಪೊಲೀಸ್ ಪರ ವಕೀಲರು ವಾದಿಸಿದರು. ಈ ವೇಳೆ ದರ್ಶನ್ ಪರ ವಕೀಲ ಈಗಾಗಲೇ ಬಾಡಿ ವಶಕ್ಕೆ ಪಡೆಯಲಾಗಿದೆ. ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ನಡೆಸಲಾಗಿದೆ. ಹಾಗಾಗಿ ಪೊಲೀಸ್ ವಶಕ್ಕೆ ಅಗತ್ಯವಿಲ್ಲ ಎಂದು ದರ್ಶನ್ ಪರ ವಕೀಲ ಮೌನೇಶ್ ವಾದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments