Thursday, September 19, 2024
Google search engine
Homeತಾಜಾ ಸುದ್ದಿನಟ ದರ್ಶನ್ ಗೆ ಜೈಲೇ ಗತಿ: ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್ ಗೆ ಜೈಲೇ ಗತಿ: ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ತನಿಖೆ ಪ್ರಗತಿಯಲ್ಲಿ ಇರುವುದರಿಂದ ಹಾಗೂ ದರ್ಶನ್ ಪ್ರಭಾವಿ ವ್ಯಕ್ತಿ ಆಗಿರುವುದರಿಂದ ಇನ್ನಷ್ಟು ಮಾಹಿತಿ ಸಂಗ್ರಹಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಬಂಧನ ಅವಧಿ ವಿಸ್ತರಣೆ ಮಾಡುವಂತೆ ಪೊಲೀಸರ ಪರ ವಕೀಲರು ವಾದಿಸಿದರು.

ಎರಡೂ ಕಡೆಯ ವಾದ ಆಲಿಸಿದ ನಂತರ ನ್ಯಾಯಾಲಯ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments