Home ತಾಜಾ ಸುದ್ದಿ ಗೃಹಲಕ್ಷ್ಮೀ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಸರ್ಕಾರದಿಂದ ಘೋಷಣೆ

ಗೃಹಲಕ್ಷ್ಮೀ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಸರ್ಕಾರದಿಂದ ಘೋಷಣೆ

by Editor
0 comments

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ನೀಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಂಪರ್ ಆಫರ್ ನೀಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಕ್ಸ್ ನಲ್ಲಿ ಬಿಡುಗಡೆ ಮಾಎಇದ ವೀಡಿಯೊದಲ್ಲಿ ರಾಜ್ಯದ ಮಹಿಳೆಯರಿಗೆ ಆಫರ್ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಕುರಿತು ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಅವರು ಮಹಿಳೆಯರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ.

ಮನೆಯೊಡತಿ ಅಥವಾ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್​ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್​ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

banner

ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ.

ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.

 

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು! ಐಪಿಎಲ್‌ ಹರಾಜಿನಲ್ಲಿ ಸೇಲಾದ 13 ಕನ್ನಡಿಗರು: ಮಯಾಂಕ್ ಕಡೆಗಣನೆ! Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್! Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ